ಭಾರೀ ಡಿಸ್ಕೌಂಟ್!..128GB ಸ್ಟೋರೇಜ್..50MP ಕ್ಯಾಮೆರಾ!..ಇದು ಯಾವ ಫೋನ್?
ಜನಪ್ರಿಯ ಮೊಬೈಲ್ ಕಂಪನಿ ರಿಯಲ್‌ಮಿ ಈಗಾಗಲೇ ಕೆಲವು ಮೊಬೈಲ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ರಿಯಲ್‌ಮಿ 12X 5G (Realme 12x 5G) ಫೋನ್ ಸಹ ಆಕರ್ಷಕ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಅಂದಹಾಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ 12X 5G ಫೋನ್ ಭಾರೀ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಆಗಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಇದೀಗ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ 2024 (flipkart big saving days) ಚಾಲ್ತಿ ಆಗಲಿದೆ. ಈ ಸೇಲ್‌ನಲ್ಲಿ ರಿಯಲ್‌ಮಿ 12X 5G (Realme 12x 5G) ಮೊಬೈಲ್ ಶೇ. 28% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಕೊಡುಗೆಯಲ್ಲಿ 13,499ರೂ. ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಅಂದಹಾಗೆ ಈ ಫೋನ್ 50 ಮೆಗಾ ಪಿಕ್ಸಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು, ಇದರ ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದೆ. ಇನ್ನು ಇದು ಟ್ವಿಲೈಟ್ ಪರ್ಪಲ್ ಹಾಗೂ ವುಡ್‌ಲ್ಯಾಂಡ್ ಗ್ರೀನ್ ಕಲರ್ ಆಯ್ಕೆ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ 12X 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ರಿಯಲ್‌ಮಿ 12X 5G ಮೊಬೈಲ್ ಫೀಚರ್ಸ್
ರಿಯಲ್‌ಮಿ 12X 5G ಮೊಬೈಲ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಪಡೆದಿದ್ದು, ಹಾಗೆಯೇ 1080 x 2400 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು 120 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, 91.40% ಅನುಪಾತವನ್ನು ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 950 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ.
ರಿಯಲ್‌ಮಿ 12X 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸಾಮರ್ಥ್ಯವನ್ನು ಇದು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಅಲ್ಲದೇ 4GB/6GB/8GB RAM ವೇರಿಯಂಟ್ ಆಯ್ಕೆಗಳಲ್ಲಿ ಇದು ಲಭ್ಯ. ಇದರ ಜೊತೆಗೆ 8GB ಡೈನಾಮಿಕ್ RAM ಸೌಲಭ್ಯ ಸಹ ಸಿಗಲಿದೆ.
ರಿಯಲ್‌ಮಿ 12X 5G ಮೊಬೈಲ್ ಈ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸೆಟ್‌ಅಪ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಈ ಫೋನ್ 8 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಆಯ್ಕೆಯನ್ನು ಪಡೆದುಕೊಂಡಿದೆ. ಅಲ್ಲದೇ 1080P @ 30fps ಸಪೋರ್ಟ್‌ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಬಹುದು.
ರಿಯಲ್‌ಮಿ 12X 5G ಮೊಬೈಲ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಏರ್ ಗೆಸ್ಚರ್ ಸೌಲಭ್ಯ, IP54 ರೇಟಿಂಗ್ ಆಯ್ಕೆ ಹಾಗೂ ಡ್ಯುಯಲ್ ಸ್ಟಿರಿಯೋ ಸ್ಪೀಕರ್ ಸೌಲಭ್ಯದ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈ-ಫೈ, ಯುಎಸ್‌ಬಿ ಸಿ ಟೈಪ್ ಆಯ್ಕೆಗಳು ಇದೆ.


Click it and Unblock the Notifications








