Realme: ರಿಯಲ್‌ಮಿಯ ಈ ಹೊಸ ಫೋನ್ ಮೇಲೆ ಭರ್ಜರಿ ಆಫರ್! 128 GB ಸ್ಟೋರೇಜ್ ಆಯ್ಕೆ
ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು (Realme smartphone) ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಸೌಲಭ್ಯ ಪಡೆದಿರುತ್ತವೆ. ಅದರಂತೆ ಈಗ ಬಹುಬೇಡಿಕೆಯ ಹಾಗೂ ಇತ್ತೀಚೆಗೆ ಲಾಂಚ್ ಆದ ರಿಯಲ್‌ಮಿ 12x 5G ಸ್ಮಾರ್ಟ್‌ಫೋನ್‌ಗೆ (Realme 12x 5G smartphone) ಭರ್ಜರಿ ಆಫರ್ ನೀಡಲಾಗಿದೆ.
ಹೌದು, ರಿಯಲ್‌ಮಿ ಸ್ಮಾರ್ಟ್‌ಫೋನ್ ಅನ್ನು ಇದೀಗ ನೀವು ಭಾರೀ ಕಡಿಮೆ ದರದಲ್ಲಿ ಖರೀದಿ ಮಾಡಬಹುದಾಗಿದೆ. ಈ ಫೋನ್ 128 GB ಸ್ಟೋರೇಜ್ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್ ಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ಗೆ ಇರುವ ಆಫರ್ ಏನು?, ಇದರ ಪ್ರಮುಖ ಫೀಚರ್ಸ್ ಏನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ ನೋಡಿ.

ರಿಯಲ್‌ಮಿ 12x 5G ಸ್ಮಾರ್ಟ್‌ಫೋನ್ ಆಪರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 17,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು ಆಫರ್ ಬೆಲೆಯಾದ 13,499 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್ 25% ರಿಯಾಯಿತಿ ಘೋಷಣೆ ಮಾಡಿದೆ. ಇದರ ಜೊತೆಗೆ ನೀವು ಬ್ಯಾಂಕ್ ಆಫರ್ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ದರದಲ್ಲಿ ಈ ಫೋನ್ ನಿಮ್ಮದಾಗಿಸಿಕೊಳ್ಳಬಹುದಾಗಿದೆ.
ಬ್ಯಾಂಕ್ ಆಫರ್ ವಿಚಾರಕ್ಕೆ ಬಂದರೆ ಫ್ಲಿಪ್‌ಕಾರ್ಟ್ ಯುಪಿಐ ವ್ಯವಹಾರದಲ್ಲಿ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನಲ್ಲಿ 5% ಕ್ಯಾಶ್‌ಬ್ಯಾಕ್ , ಕಾಂಬೊ ಮೊಬೈಲ್ ಮತ್ತು ಕೇಸ್‌ಕವರ್‌ನಲ್ಲಿ ಹೆಚ್ಚುವರಿ 10% ರಿಯಾಯಿತಿ, FreebieSpotify ಪ್ರೀಮಿಯಂ ಸೌಲಭ್ಯ, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಲೇಟರ್ ಪೇ ಮೂಲಕ ಖರೀದಿ ಮಾಡಿದ್ರೆ, 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ರಿಯಲ್‌ಮಿ 12x 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.72 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 120Hz ರಿಫ್ರೆಶ್ ರೇಟ್, 950 ನಿಟ್ಸ್ (HBM) ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 86.5% ಸ್ಕ್ರೀನ್-ಟು-ಬಾಡಿ ಅನುಪಾತ, 392 ಪಿಪಿಐ ಸಾಂದ್ರತೆ ಪಡೆದುಕೊಂಡಿದೆ.
ರಿಯಲ್‌ಮಿ 12x 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಇನ್ನು ಈ ಫೋನ್ ಆಂಡ್ರಾಯ್ಡ್ 14, ರಿಯಲ್‌ಮಿ ಯುಐ 5.0 ಓಎಸ್ ನಲ್ಲಿ ರನ್ ಆಗಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಬಲ ಪಡೆದುಕೊಂಡಿದೆ. ಅಲ್ಲದೆ ಮಾಲಿ-G57 MC2 ಜಿಪಿಯು ಬಲ ಪಡೆದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಆಫರ್ ಬೆಲೆಗೆ ಲಭ್ಯ ಇರುವ ಫೋನ್ 128 GB ಹಾಗೂ 6 GB RAM ಸ್ಟೋರೇಜ್‌ನಲ್ಲಿ ಲಭ್ಯ ಇದೆ.
ರಿಯಲ್‌ಮಿ 12x 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್, f/1.8, 26mm (ಅಗಲ), 1/2.76", 0.64µm, PDAF ಮುಖ್ಯ ಸೆನ್ಸರ್ ಹಾಗೂ 2 ಮೆಗಾಪಿಕ್ಸೆಲ್ f/2.4, ಡೆಪ್ತ್ ಸೆನ್ಸರ್ ಹೊಂದಿದೆ. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಕಾಣಬಹುದಾಗಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ f/2.0, ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ರಿಯಲ್‌ಮಿ 12x 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 45W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರಿಂದಾಗಿ 30 ನಿಮಿಷಗಳಲ್ಲಿ 1-50% ಬ್ಯಾಟರಿ ಭರ್ಜರಿ ಮಾಡುತ್ತದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್, 24-ಬಿಟ್/192kHz ಹೈ-ರೆಸ್ ಆಡಿಯೋ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.3, A2DP, LE, aptX HD, LHDC ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಪಡೆದುಕೊಂಡಿದೆ


Click it and Unblock the Notifications








