ನಾಳೆ Realme 13+ 5G ಸೇಲ್: 4,500 ಆಫರ್ ಸಿಗುತ್ತೆ.. ವಿಶೇಷತೆಗಳೇನು?
ರಿಯಲ್‌ಮಿ ಮೊಬೈಲ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಕಂಪನಿಯ ಹೊಸ ರಿಯಲ್‌ಮಿ 13+ 5G (Realme 13+ 5G) ಫೋನ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದು ರಿಯಲ್‌ಮಿ 13 ಸರಣಿಯ ಇತ್ತೀಚಿನ ಮಧ್ಯಮ ಶ್ರೇಣಿಯ 5G ಮೊಬೈಲ್ ಆಗಿದೆ. ಈ ಫೋನ್ ನಾಳೆ (ಸೆಪ್ಟೆಂಬರ್ 6) ಮೊದಲ ಮಾರಾಟಕ್ಕೆ ಸಜ್ಜಾಗಿದೆ. ರಿಯಲ್‌ಮಿಯ ಅಧಿಕೃತ ವೆಬ್‌ಸೈಟ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿದೆ. ಮೊದಲ ದಿನವೇ ಈ ಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಆಫರ್ ಲಭ್ಯವಿದೆ.
ಕಂಪನಿಯು ರಿಯಲ್‌ಮಿ 13+ 5G ಫೋನನ್ನು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡಲಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಲ್ಪೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ನೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 5000mAh ಬ್ಯಾಟರಿ, 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಫೋನಿನ ಬೆಲೆ ಮತ್ತು ಆಫರ್ ತಿಳಿಯೋಣ ಬನ್ನಿ.

ರಿಯಲ್‌ಮಿ 13+ 5G ಫೋನಿನ ಬೆಲೆ ಮತ್ತು ಆಫರ್
ರಿಯಲ್‌ಮಿ 13+ 5G ಫೋನನ್ನು ಮೂರು ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸಲಾಗಿದೆ. ನೀವು ವಿಕ್ಟರಿ ಗೋಲ್ಡ್, ಸ್ಪೀಡ್ ಗ್ರೀನ್ ಮತ್ತು ಡಾರ್ಕ್ ಪರ್ಪಲ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನ 8GB + 128GB ಸ್ಟೋರೇಜ್ ಬೆಲೆ 22,999 ರೂ. ಇದೆ. 8GB + 256GB ರೂಪಾಂತರದ ಬೆಲೆ 24,999 ರೂ. ಆಗಿದೆ. 12GB + 256GB ಸ್ಟೋರೇಜ್ ಬೆಲೆ 26,999 ರೂ.ಗೆ ಲಭ್ಯವಿದೆ.
ಮೊದಲ ದಿನವೇ ಈ ಫೋನನ್ನು ಖರೀದಿಸುವ ಗ್ರಾಹಕರಿಗೆ ಕಂಪನಿಯು ಕೆಲವು ಆಫರ್‌ಗಳನ್ನು ನೀಡುತ್ತದೆ. ನೀವು ಈ ಫೋನಿನ ಖರೀದಿ ಮೇಲೆ 1,500 ಕ್ಯಾಶ್‌ಬ್ಯಾಕ್ ಪಡೆಯಬಹುದು. ಜೊತೆಗೆ 3,000 ರೂ.ಗಳ ಸೀಮಿತ ಪ್ರೀ ಬುಕಿಂಗ್ ಆಫರ್‌ನ ಲಾಭ ಪಡೆಯಬಹುದು. ಈಗಾಗಲೇ ಮುಂಗಡ ಬುಕಿಂಗ್ ಶುರು ಆಗಿದೆ. ರಿಯಲ್‌ಮಿಯ ಅಧಿಕೃತ ವೆಬ್‌ಸೈಟ್ (realme.com), ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಮುಂಗಡ ಬುಕಿಂಗ್‌ಗೆ ಅವಕಾಶವಿದೆ.
ರಿಯಲ್‌ಮಿ 13+ 5G ಫೋನಿನ ವೈಶಿಷ್ಟ್ಯಗಳು
ಡಿಸ್ಲ್ಪೇ: ರಿಯಲ್‌ಮಿ 13+ 5G ಫೋನ್ 6.67 ಇಂಚಿನ ಪೂರ್ಣ HD+ AMOLED ಡಿಸ್ಲ್ಪೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ರೇಟ್, 2400 × 1080 ಪಿಕ್ಸೆಲ್ ರೆಸಲ್ಯೂಶನ್ ಮತ್ತು 2000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸಪೋರ್ಟ್ ಪಡೆದಿದೆ.
ಪ್ರೊಸೆಸರ್: ಈ ಹೊಸ ರಿಯಲ್‌ಮಿ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್ ರಿಯಲ್‌ಮಿ UI 5 ಜೊತೆಗೆ Android 14 ನಲ್ಲಿ ಕೆಲಸ ನಿರ್ವಹಿಸುತ್ತದೆ.
ಕ್ಯಾಮೆರಾ: ರಿಯಲ್‌ಮಿ 13+ 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು Sony LYT-600 ಸಂವೇದಕ ಹೊಂದಿದೆ. ಜೊತೆಗೆ, LED ಫ್ಲಾಶ್, 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾ ಇದೆ. ಸೆಲ್ಪಿ ಮತ್ತು ವಿಡಿಯೋ ಕೆರೆಗಾಗಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಇದು ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕ ಹೊಂದಿದೆ.
ಬ್ಯಾಟರಿ: ಹೊಸ ರಿಯಲ್‌ಮಿ 13+ 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನಿನ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP65 ರೇಟಿಂಗ್ ಪಡೆದಿದೆ. 161.7×74.7×7.6 ಎಂಎಂ ದಪ್ಪ ಮತ್ತು 185 ಗ್ರಾಂ ತೂಕ ಹೊಂದಿದೆ.
ಇತರೆ ವೈಶಿಷ್ಟ್ಯಗಳು: ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 3.5 ಎಂಎಂ ಆಡಿಯೊ ಜಾಕ್, ಸ್ಟಿರಿಯೊ ಸ್ಪೀಕರ್‌ಗಳು, 5G, ಡ್ಯುಯಲ್ 4G VoLTE, Wi-Fi 6 802.11 ax (2.4GHz + 5GHz), ಬ್ಲೂಟೂತ್ 5.4, GPS, ಗೆಲಿಲಿಯೊ, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಇನ್ನಿತರ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








