Home
ಸುದ್ದಿಜಾಲ

ಇಂದು Realme 14 Pro 5G ಫಸ್ಟ್ ಸೇಲ್; 3000 ರಿಯಾಯಿತಿ.. ಕಡಿಮೆ ಬೆಲೆ.. ಸೂಪರ್ ಫೀಚರ್ಸ್‌

ರಿಯಲ್‌ಮಿ ಪ್ರಿಯರಿಗೆ ಇಲ್ಲಿದೆ ಖುಷಿ ಸುದ್ದಿ. ಇತ್ತೀಚೆಗೆ ಬಿಡುಗಡೆಯಾದ ಹೊಸ ರಿಯಲ್‌ಮಿ ಮೊಬೈಲ್ ಇಂದು ಅಧಿಕೃತವಾಗಿ ಗ್ರಾಹಕರ ಕೈ ಸೇರಲಿದೆ. ಹೌದು, ಬಹುನಿರೀಕ್ಷಿತ ರಿಯಲ್‌ಮಿ 14 ಪ್ರೊ 5G (Realme 14 Pro 5G) ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದನ್ನು ರಿಯಲ್‌ಮಿ 14 ಪ್ರೊ (Realme 14 Pro Series) ಸರಣಿಯ ಅಡಿಯಲ್ಲಿ ಪರಿಚಯಿಸಲಾಗಿದೆ. ಅಂದಹಾಗೆ, ರಿಯಲ್‌ಮಿ 14 ಪ್ರೊ ಮೊಬೈಲ್ ಇಂದು (ಜನವರಿ 23) ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಇದು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಟಕ್ಕರ್ ಕೊಡಲು ಸಜ್ಜಾಗಿದೆ.

ಹೌದು, ಕಂಪನಿಯು ರಿಯಲ್‌ಮಿ 14 ಪ್ರೊ 5G ಮತ್ತು ರಿಯಲ್‌ಮಿ 14 ಪ್ರೊ+ 5G ಫೋನ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಪೈಕಿ ರಿಯಲ್‌ಮಿ 14 ಪ್ರೊ ಮೊಬೈಲ್ ಪ್ರಿಯರ ಪ್ರಮುಖ ಆಕರ್ಷಣೆಯಾಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.77 ಇಂಚಿನ ಡಿಸ್ಪ್ಲೇ ಇದೆ. ಜೊತೆಗೆ 256GB ಸ್ಟೋರೇಜ್‌, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಒಳಗೊಂಡಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ಆಫರ್‌ಗಳನ್ನು ತಿಳಿಯಲು ಮುಂದೆ ಓದಿ.

ಇಂದು Realme 14 Pro ಸೇಲ್: 3000 ರಿಯಾಯಿತಿ.. ಕಡಿಮೆ ಬೆಲೆ.. ಹೀಗಿವೆ ಫೀಚರ್ಸ್‌

ರಿಯಲ್‌ಮಿ 14 ಪ್ರೊ 5G ಬೆಲೆ ಮತ್ತು ಆಫರ್‌ಗಳು

ರಿಯಲ್‌ಮಿ 14 ಪ್ರೊ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ 8GB RAM + 128GB ಸ್ಠೋರೇಜ್ ಬೆಲೆ 22,999 ರೂ. ಮತ್ತು 8GB RAM + 25GB ಸ್ಟೋರೇಜ್ ಬೆಲೆ 24,999 ರೂ. ಇದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಕೆಲವು ಆಫರ್‌ಗಳನ್ನು ಘೋಷಿಸಿದೆ. ನೀವು ಮೊದಲ ದಿನವೇ ಈ ಮೊಬೈಲ್ ಖರೀದಿಸಿದರೆ, 2000 ರೂ. ಬ್ಯಾಂಕ್ ಆಫರ್‌ ಸಿಗುತ್ತದೆ.

ಇದಲ್ಲದೆ 1,000 ರೂ. ಎಕ್ಸ್‌ಚೇಂಜ್ ಬೋನಸ್ ಮತ್ತು 12 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯದ ಲಾಭ ಪಡೆಯಬಹುದು. ಈ ಮೊಬೈಲ್ ಪರ್ಲ್ ವೈಟ್, ಪಿಂಕ್ ಮತ್ತು ಸ್ಯೂಡ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಇಂದು (ಜನವರಿ 23) ಮಧ್ಯಾಹ್ನ 12 ಗಂಟೆಯಿಂದ ಅಧಿಕೃತವಾಗಿ ಈ ಫೋನಿನ ಮೊದಲ ಮಾರಾಟ ಶುರುವಾಗಲಿದೆ. ನೀವು, ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಬಹುದು.

ರಿಯಲ್‌ಮಿ 14 ಪ್ರೊ 5G ಫೀಚರ್ಸ್‌

ರಿಯಲ್‌ಮಿ 14 ಪ್ರೊ 5G ಫೋನ್ 6.77 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 412×1080 ಪಿಕ್ಸೆಲ್‌ ರೆಸಲ್ಯೂಶನ್, 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G615 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಇಂದು Realme 14 Pro ಸೇಲ್: 3000 ರಿಯಾಯಿತಿ.. ಕಡಿಮೆ ಬೆಲೆ.. ಹೀಗಿವೆ ಫೀಚರ್ಸ್‌

ರಿಯಲ್‌ಮಿ 14 ಪ್ರೊ 5G ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಇದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ರಿಯಲ್‌ಮಿ ಫೋನ್ 12GB RAM ಹೊಂದಿದೆ. ಜೊತೆಗೆ 14GB ವರ್ಚುವಲ್ RAM ಬೆಂಬಲ ಸಹ ಹೊಂದಿದೆ. ಈ ಮೊಬೈಲ್ 128GB ಮತ್ತು 256GB ಸ್ಟೋರೇಜ್‌ ಆಯ್ಕೆಯೊಂದಿಗೆ ಬರುತ್ತದೆ.

ರಿಯಲ್‌ಮಿ 14 ಪ್ರೊ 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಮೊಬೈಲ್ 45W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಹಾಗೆಯೇ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ವೈ-ಫೈ 6, ಬ್ಲೂಟೂತ್ 5.2 ಮತ್ತು ಯುಎಸ್‌ಬಿ ಟೈಪ್ ಸಿ, ಸ್ಟಿರಿಯೊ ಸ್ಪೀಕರ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Realme 14 Pro 5G Goes on First Sale in India Today via Flipkart: check price, offers and specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+