ಇಂದು ಧೂಳೆಬ್ಬಿಸಲಿದೆ Realme 14T ಫೋನ್; 6000mAh ಬ್ಯಾಟರಿ.. ಬೆಲೆಯೂ ಸೋರಿಕೆ! ಇಷ್ಟೊಂದು ಫೀಚರ್‌ಗಳಾ?
ರಿಯಲ್‌ಮಿ ಇಂದು ಭಾರತದಲ್ಲಿ ಹೊಚ್ಚ ಹೊಸ 5G ಫೋನನ್ನು ಬಿಡುಗಡೆ ಮಾಡುತ್ತಿದೆ. ಕಂಪನಿಯು ಇದನ್ನು 20,000 ರೂ.ಗಿಂತಲೂ ಕಡಿಮೆ ಬೆಲೆಗೆ ಪರಿಚಯಿಸಲಿದೆ. ಹೌದು, ಮೊಬೈಲ್ ಪ್ರಿಯರ ಬಹುನಿರೀಕ್ಷಿತ ರಿಯಲ್‌ಮಿ 14T 5G (Realme 14T 5G) ಇಂದು ಅಧಿಕೃತವಾಗಿ ರಿಲೀಸ್ ಆಗಲಿದೆ. ಇದು ಅತ್ಯಂತ ಪ್ರಕಾಶಮಾನವಾದ ಡಿಸ್ಪ್ಲೇ, ದೀರ್ಘ ಬ್ಯಾಟರಿ ಬ್ಯಾಕಪ್ ಹೊಂದಿದೆ. ಬಿಡುಗಡೆಯ ಬಳಿಕ, ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಮಾರಾಟವಾಗಲಿದೆ. ಈ ಫೋನಿನ ಬೆಲೆ, ವಿಶೇಷತೆಗಳು ಮತ್ತು ಬಿಡುಗಡೆ ವಿವರಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ರಿಯಲ್‌ಮಿ 14T 5G ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳೊಂದಿಗೆ ಬರಲಿದೆ. ಈ ಮೊಬೈಲ್ 6.6 ಇಂಚಿನ ಡಿಸ್ಪ್ಲೇಯೊಂದಿಗೆ ಬರಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿರಲಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಎಐ ಡ್ಯುಯಲ್ ಕ್ಯಾಮೆರಾ ಸೆಟಪ್ ಅಳವಡಿಸಲಾಗಿದೆ. ಇದರೊಂದಿಗೆ 6,000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್, 8GB RAM + 256GB ಸ್ಟೋರೇಜ್, IP69 ರೇಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಬರಲಿದೆ.

ರಿಯಲ್‌ಮಿ 14T 5G ಬಿಡುಗಡೆ ಸಮಯ
ಭಾರತದಲ್ಲಿ ರಿಯಲ್‌ಮಿ 14T 5G ಮೊಬೈಲ್ ಇಂದು (ಏಪ್ರಿಲ್ 25, ಶುಕ್ರವಾರ) ಮಧ್ಯಾಹ್ನ 12 ಗಂಟೆಗೆ ಬಿಡುಗಡೆಯಾಗಲಿದೆ. ರಿಯಲ್‌ಮಿ 14T ಫೋನ್ ರಿಯಲ್‌ಮಿ 14 ಸರಣಿಗೆ ಹೊಸ ಸೇರ್ಪಡೆಯಾಗಲಿದೆ. ಕಂಪನಿಯ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋನಿನ ಬಿಡುಗಡೆ ಸಮಾರಂಭವನ್ನು ನೇರಪ್ರಸಾರ ವೀಕ್ಷಿಸಬಹುದು. ಈ ಫೋನ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ (realme.com) ಮೂಲಕ ಮಾರಾಟವಾಗಲಿದೆ.
ಭಾರತದಲ್ಲಿ ರಿಯಲ್‌ಮಿ 14T ಬೆಲೆ (ನಿರೀಕ್ಷಿತ)
8GB RAM + 128GB ಸ್ಟೋರೇಜ್ ಬೆಲೆ = 17,999 ರೂ.
8GB RAM + 256GB ಸ್ಟೋರೇಜ್ ಬೆಲೆ = 18,999 ರೂ.
ಆನ್‌ಲೈನ್‌ನಲ್ಲಿ ರಿಯಲ್‌ಮಿ 14T ಬೆಲೆ ವಿವರಗಳನ್ನು ಬಹಿರಂಗಪಡಿಸಲಾಗಿದೆ. ಈ ಫೋನಿನ ಆರಂಭಿಕ ಬೆಲೆ 17,999 ರೂ. ಎಂದು ವರದಿಯಾಗಿದೆ. ಈಗಾಗಲೇ ಈ ಫೋನಿನ ಪ್ರೋಮೋ ಚಿತ್ರವನ್ನು ವೈರಲ್ ಆಗಿದೆ. ಅದರಂತೆ, ರಿಯಲ್‌ಮಿ 14T 5G ಫೋನ್ ಖರೀದಿಯ ಮೇಲೆ 1,000 ರೂ. ತಕ್ಷಣದ ರಿಯಾಯಿತಿ ಲಭ್ಯವಿರುತ್ತದೆ ಎಂದು ಹೇಳಲಾಗಿದೆ. ಇದು ಸಿಲ್ಕನ್ ಗ್ರೀನ್, ವೈಲೆಟ್ ಗ್ರೇಸ್ ಮತ್ತು ಸ್ಯಾಟಿನ್ ಇಂಕ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಖರೀದಿಸಲು ಈ ಲಿಂಕ್ ಕ್ಲಿಕ್ ಮಾಡಿ.
ರಿಯಲ್‌ಮಿ 14T 5G ವೈಶಿಷ್ಟ್ಯಗಳು
ರಿಯಲ್‌ಮಿ 14T 5G ಮೊಬೈಲ್ 6.6 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,340 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ ಈ ರಿಯಲ್‌ಮಿ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಅನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ. ಇದು ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ UI 6.0 ನೊಂದಿಗೆ ಕೆಲಸ ಮಾಡಲಿದೆ.
ರಿಯಲ್‌ಮಿ 14T 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಪಟ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಎಐ (AI) ಕ್ಯಾಮೆರಾ ಲಭ್ಯವಿರುತ್ತದೆ. ಹಾಗೆಯೇ ದ್ವಿತೀಯ ಕ್ಯಾಮೆರಾ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರುತ್ತದೆ. ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 100W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗೆ IP69 ರೇಟಿಂಗ್ ಪಡೆದಿದೆ.


Click it and Unblock the Notifications








