ಇಂದು Realme 14x 5G ಗ್ರ್ಯಾಂಡ್ ಲಾಂಚ್; 6000mAh ದೊಡ್ಡ ಬ್ಯಾಟರಿ.. 15,000ಕ್ಕಿಂತ ಕಡಿಮೆ ಬೆಲೆ!
ಮೊಬೈಲ್ ಪ್ರಿಯರ ಕಾಯುವಿಕೆ ಅತ್ಯ! ಹೊಸ ರಿಯಲ್‌ಮಿ ಫೋನ್ ಇಂದು ಭಾರತದಲ್ಲಿ ಬಿಡುಗಡೆ. ಹೌದು, ಬಹುನಿರೀಕ್ಷಿತ ರಿಯಲ್‌ಮಿ 14x 5G (Realme 14x 5G) ಸ್ಮಾರ್ಟ್‌ಫೋನ್ ಇಂದು (ಡಿಸೆಂಬರ್ 18) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಲಗ್ಗೆ ಇಡಲಿದೆ. ಕಂಪನಿಯು ಈ ಫೋನನ್ನು ಬಜೆಟ್ ಬೆಲೆಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಇದು ದೊಡ್ಡ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಿಗೆ ಪೈಪೋಟಿ ನೀಡುವ ಸೂಚನೆ ನೀಡಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ 14x 5G ಫೋನ್ ಮೂರು ಬಣ್ಣಗಳ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ನೀವು ಕಪ್ಪು, ಕೆಂಪು ಹಾಗೂ ಬಿಳಿ ಬಣ್ಣದಲ್ಲಿ ಖರೀದಿಸಬಹುದು. ಈ ಮೊಬೈಲ್ 6000mAh ದೊಡ್ಡ ಬ್ಯಾಟರಿ ಹೊಂದಿದೆ ಎಂದು ಖಚಿತಪಡಿಸಲಾಗಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಜೊತೆಗೆ 6.67 ಇಂಚಿನ ಡಿಸ್ಪ್ಲೇ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ.

ರಿಯಲ್‌ಮಿ 14x 5G ಬೆಲೆ (ನಿರೀಕ್ಷಿತ)
ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಬಿಡುಗಡೆಯ ಬಳಿಕ, ಈ ಫೋನ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ (realme.com) ಮೂಲಕ ಮಾರಾಟವಾಗಲಿದೆ. ಕಂಪನಿಯು ರಿಯಲ್‌ಮಿ 14x 5G ಅನ್ನು 15,000 ರೂ.ಗಿಂತ ಕಡಿಮೆ ಬೆಲೆಗೆ ಪರಿಚಯಿಸುವುದು ಖಚಿತವಾಗಿದೆ. ಯಿರುತ್ತದೆ ಎಂದು ಕಂಪನಿಯು ಈಗಾಗಲೇ ದೃಢಪಡಿಸಿದೆ. ಈ ಫೋನಿನ ಇನ್ನಿತರ ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.
ರಿಯಲ್‌ಮಿ 14x 5G ವೈಶಿಷ್ಟ್ಯಗಳು (ನಿರೀಕ್ಷಿತ)
ಡಿಸ್ಪ್ಲೇ ವಿವರ
ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ರೆಸಲ್ಯೂಶನ್‌ನ ಐಪಿಎಸ್ ಎಲ್‌ಸಿಡಿ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲ ಹೊಂದಿರಲಿದೆ.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ 14x 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಫೋನ್ ಇತ್ತೀಚಿನ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ಮಾಡಲಿದೆ.
ಸ್ಟೋರೇಜ್ ಆಯ್ಕೆ
ರಿಯಲ್‌ಮಿ 14x 5G ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿರುತ್ತದೆ. ಜೊತೆಗೆ 10GB ವರೆಗಿನ ವರ್ಚುವಲ್ RAM ಸೌಲಭ್ಯ ಇರಲಿದೆ.

ಕ್ಯಾಮೆರಾ ಸೆಟಪ್
ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿರುತ್ತದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ 14x 5G ಫೋನಿನ ಪ್ರಮುಖ ವಿಶೇಷತೆಯೆಂದರೆ, ಇದರ ಬ್ಯಾಟರಿ ಬ್ಯಾಕಪ್ ಆಗಿದೆ. ಈ ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ 14x 5G ಮೊಬೈಲ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಹಾಗೆಯೇ ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳಲ್ಲಿ ಒಳಗೊಂಡಿರಲಿದೆ.


Click it and Unblock the Notifications








