Just In
- 14 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 15 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 16 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 18 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Movies
ವಿಷ್ಣು ಸ್ಮಾರಕ ಉದ್ಘಾಟನೆ: ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತಿದೆ ಎಂದ ಕಿಚ್ಚ ಸುದೀಪ್
- News
Breaking; ಪಿಎಸ್ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್ ಸೂದ್ ಟ್ವೀಟ್
- Sports
U-19 Women's T20 World Cup 2023: ಭಾರತ ತಂಡವನ್ನು ಭೇಟಿ ಮಾಡಿದ 'ಚಿನ್ನದ ಹುಡುಗ' ನೀರಜ್ ಚೋಪ್ರಾ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ರಿಯಲ್ ಮಿ 5' ಮತ್ತು 'ರಿಯಲ್ ಮಿ 5 ಪ್ರೊ' ಬಿಡುಗಡೆ!.ಆರಂಭಿಕ ಬೆಲೆ 9,999ರೂ!
ಚೀನಾ ಮೂಲದ 'ರಿಯಲ್ ಮಿ' ಸ್ಮಾರ್ಟ್‌ಫೋನ್ ಕಂಪೆನಿಯು ಇತ್ತೀಚಿಗೆ 'ರಿಯಲ್ ಮಿ 3 'ಮತ್ತು 'ರಿಯಲ್ ಮಿ 3 ಪ್ರೊ' ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸಖತ್ ಹವಾ ಕ್ರಿಯೆಟ್ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಕಂಪೆನಿಯು ತನ್ನ ಬಹುನಿರೀಕ್ಷಿತ 'ರಿಯಲ್ ಮಿ 5' ಮತ್ತು 'ರಿಯಲ್ ಮಿ 5 ಪ್ರೊ' ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಮೊಬೈಲ್ ಮಾರುಕಟ್ಟೆಯಲ್ಲಿ ಸಂಚಯಲನ ಮೂಡಿಸಿದೆ

ಹೌದು, ರಿಯಲ್ ಮಿ ಸಂಸ್ಥೆಯು ತನ್ನ ರಿಯಲ್ ಮಿ ಸರಣಿಯಲ್ಲಿ ಇಂದು (ಅಗಷ್ಟ 20) 'ರಿಯಲ್ ಮಿ 5' ಮತ್ತು 'ರಿಯಲ್ ಮಿ 5 ಪ್ರೊ' ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಪ್ರತ್ಯೇಕವಾಗಿ ಮೂರು ವೇರಿಯಂಟ್‌ಗಳನ್ನು ಹೊಂದಿದ್ದು, ಇದೇ ಅಗಷ್ಟ್ 27ರಂದು 'ರಿಯಲ್ ಮಿ 5' ಸ್ಮಾರ್ಟ್‌ಫೋನ್ ಮೊದಲ ಸೇಲ್ ಶುರುವಾಗಲಿದೆ. ಹಾಗೆಯೇ ಅದೇ ಸೆಪ್ಟಂಬರ್ 4ರಂದು ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ನಡೆಯಲಿದೆ.

ರಿಯಲ್ ಮಿ 5 ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಹೊಂದಿದ್ದು, 5000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್ 48ಎಂಪಿ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಹೊಂದಿದೆ. ಒಟ್ಟಾರೇ ಕಡಿಮೆ ಬೆಲೆಯಲ್ಲಿ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಎರಡು ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆಯುವುದರಲ್ಲಿ ಅನುಮಾನವೇ ಇಲ್ಲ ಎನ್ನುವಂತಿವೆ. ಹಾಗಾದರೇ ರಿಯಲ್ ಮಿ 5 ಮತ್ತು ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್ ಮಿ 5 ಪ್ರೊ ಡಿಸ್‌ಪ್ಲೇ
ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್ 2340×1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.3 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಬೆಜೆಲ್ ರಹಿತವಾಗಿಯು ಮತ್ತು ವಾಟರ್‌ಡ್ರಾಪ್ ನಾಚ್‌ನಲ್ಲಿದ್ದು, ಡಿಸ್‌ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ನೀಡಲಾಗಿದೆ. ಹೆಚ್ಚು ಪ್ರಖರವಾಗಿರುವ ಈ ಡಿಸ್‌ಪ್ಲೇಯು 450 nits ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದೆ.

ರಿಯಲ್ ಮಿ 5 ಪ್ರೊ ಪ್ರೊಸೆಸರ್
ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್ 712 ಚಿಪ್‌ಸೆಟ್ ಆಧಾರಿತ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 710 SoC ಪ್ರೊಸೆಸರ್ ಪವರ್ ಪಡೆದಿದೆ. ಪ್ರೊಸೆಸರ್ ವೇಗವು 2.3GHz ಆಗಿದ್ದು, ಆಂಡ್ರಾಯ್ಡ್ 9 ಪೈ ಓಎಸ್ ಬೆಂಬಲವನ್ನು ಪಡೆದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಸ್ಟೋರೇಜ್, 6GB + 64GB ಸ್ಟೋರೇಜ್ ಮತ್ತು 8GB + 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ರಿಯಲ್ ಮಿ 5 ಪ್ರೊ ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ನೀಡಲಾಗಿದ್ದು, ಪ್ರಾಥಮಿಕ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 48ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು f/2.25 ಅಪರ್ಚರ್ ನೊಂದಿಗೆ 8ಎಂಪಿ ಅಲ್ಟ್ರಾ ವೈಲ್ಡ್ ಆಂಗಲ್ ಸೆನ್ಸಾರ್‌ನಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 16ಎಂಪಿ ಸೆನ್ಸಾರ್‌ನಲ್ಲಿದೆ.

ರಿಯಲ್ ಮಿ 5 ಪ್ರೊ ಬ್ಯಾಟರಿ ಬಲ
ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್ 4,035mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಪಡೆದಿದ್ದು, ಜೊತೆಗೆ VOOC 3.0 ತಂತ್ರಜ್ಞಾನದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಚಾರ್ಜಿಂಗಾಗಿ 20W ಸಾಮರ್ಥ್ಯದ ಟೈಪ್-ಸಿ ಫಾಸ್ಟ್ ಚಾರ್ಜಿಂಗ್ ಚಾರ್ಜರ್ ಅನ್ನು ನೀಡಲಾಗಿದ್ದು, ಸ್ಮಾರ್ಟ್‌ಫೋನ್ ವೇಗವಾಗಿ ಚಾರ್ಜ್ ಪಡೆದುಕೊಳ್ಳುತ್ತದೆ. ದೀರ್ಘ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಿದೆ.

ರಿಯಲ್ ಮಿ 5 ಡಿಸ್‌ಪ್ಲೇ
ರಿಯಲ್ ಮಿ 5 ಸ್ಮಾರ್ಟ್‌ಫೋನ್ 720×1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ವಿಶಾಲ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ನೀಡಲಾಗಿದ್ದು, ಅಂಚು ರಹಿತ ಮತ್ತು ಮಿನಿಡ್ರಾಪ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 164.4x75.6x9.3mm ಸುತ್ತಳತೆಯನ್ನು ಪಡೆದಿದ್ದು, ಅತ್ಯುತ್ತಮ ವೀಕ್ಷಣೆಯ ಅನುಭೂತಿ ನೀಡಲಿದೆ.

ರಿಯಲ್ ಮಿ 5 ಪ್ರೊಸೆಸರ್
ರಿಯಲ್ ಮಿ 5 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರ ಪ್ರೊಸೆಸರ್ ವೇಗವು 2.0Ghz ಆಗಿದ್ದು, ಪ್ರೊಸೆಸರ್ ವೇಗಕ್ಕೆ ಆಂಡ್ರಾಯ್ಡ್ 9 ಪೈ ಓಎಸ್ ಬೆಂಬಲವಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 3GB + 32GB ಸ್ಟೋರೇಜ್, 4GB + 64GB ಸ್ಟೋರೇಜ್ ಮತ್ತು 4GB + 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ರಿಯಲ್ ಮಿ 5 ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ನೀಡಲಾಗಿದ್ದು, ಪ್ರಾಥಮಿಕ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 12ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಅಲ್ಟ್ರಾವೈಲ್ಡ್ ಆಂಗಲ್ ಸೆನ್ಸಾರ್‌ನಲ್ಲಿದ್ದು, ಹಾಗೆಯೇ ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಸಾಮರ್ಥ್ಯದೊಂದಿಗೆ ಡೆಪ್ತ್ ಮತ್ತು ಮಾಕ್ರೋ ಮೋಡ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, AI ಬ್ಯೂಟಿ ಮೋಡ್ ಹೊಂದಿದೆ.

ರಿಯಲ್ ಮಿ 5 ಬ್ಯಾಟರಿ ಬಲ
ರಿಯಲ್ ಮಿ 5 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಶಕ್ತಿಯುತ ಬ್ಯಾಟರಿಯನ್ನು ಪಡೆದಿದ್ದು, ಸ್ಮಾರ್ಟ್‌ಫೋನ್‌ಗೆ ದೀರ್ಘಕಾಲದ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಿದೆ. ಇದರೊಂದಿಗೆ 10W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದ್ದು, ಸ್ಮಾರ್ಟ್‌ಫೋನ್‌ಗೆ ವೇಗವಾಗಿ ಚಾರ್ಜ್ ಒದಗಿಸಲಿದೆ. ನಿರಂತರ 30ಗಂಟೆಗಳ ಮ್ಯೂಸಿಕ್ ಪ್ಲೇ ಬ್ಯಾಕ್ ಸಾಮರ್ಥ್ಯ ಒಳಗೊಂಡಿದೆ.

ಲಭ್ಯತೆ ಮತ್ತು ಬೆಲೆ
ರಿಯಲ್ ಮಿ 5 ಸ್ಮಾರ್ಟ್‌ಫೋನ್ ಮೂರು ವೇರಿಯಂಟ್‌ನಲ್ಲಿ ಬಿಡುಗಡೆ ಆಗಿದ್ದು, 3GB + 32GB ವೇರಿಯಂಟ್ ಬೆಲೆಯು 9,999ರೂ.ಗಳು, 4GB + 64GB ವೇರಿಯಂಟ್ ಬೆಲೆಯು 10,999ರೂ.ಗಳು ಮತ್ತು 4GB + 128GB ವೇರಿಯಂಟ್ ಬೆಲೆಯು 11,999ರೂ.ಗಳು ಆಗಿದೆ. ಹಾಗೆಯೇ ರಿಯಲ್ ಮಿ 5 ಪ್ರೊ ಸಹ ಮೂರು ವೇರಿಯಂಟ್‌ನಲ್ಲಿದ್ದು, 4GB RAM + 64GB ವೇರಿಯಂಟ್ ಬೆಲೆಯು 13,999ರೂ.ಗಳು, 6GB + 64GB ವೇರಿಯಂಟ್ ಬೆಲೆಯು 14,999ರೂ.ಗಳು ಮತ್ತು 8GB + 128GB ವೇರಿಯಂಟ್ ಬೆಲೆಯು 16,999ರೂ.ಗಳು ಆಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470