Just In
- 17 min ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- 38 min ago
ಬೆಂಗಳೂರಿಗರೇ ಗಮನಿಸಿ... ಇನ್ನೇನು ಕೆಲವೇ ದಿನದಲ್ಲಿ NIMBUS ಆಪ್ ಲಾಂಚ್!
- 2 hrs ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 3 hrs ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
Don't Miss
- Movies
"ಚೆನ್ನಾಗಿ ತಿಂದ್ಕೊಂಡ್, ಉಂಡ್ಕೊಂಡು ಇದ್ದವನೇ ಸಾಯಂಕಾಲಕ್ಕೆ ಹೊರಟು ಹೋದ.. ಜಿಮ್ ಬಗ್ಗೆ ಭಯ ಯಾಕೆ?: ದರ್ಶನ್
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- News
Breaking: ಭವಾನಿ ರೇವಣ್ಣಗೆ ಹಾಸನದಿಂದ ಟಿಕೆಟ್ ನೀಡುವಂತೆ ಪ್ರತಿಭಟನೆ
- Sports
Women's Premier League : ಫೆಬ್ರವರಿ 2ನೇ ವಾರ ಆಟಗಾರರ ಹರಾಜು: ದೆಹಲಿಯಲ್ಲಿ ಹರಾಜು ಪ್ರಕ್ರಿಯೆ
- Automobiles
ಬಾಕ್ಸ್ ಆಫೀಸ್ನಲ್ಲಿ 'ಪಠಾಣ್' ಅಬ್ಬರ: ಈ ಚಿತ್ರದಲ್ಲಿ ಕಾಣಿಸಿಕೊಂಡ ಆಕರ್ಷಕ ಕಾರುಗಳಿವು...
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ರಿಯಲ್ ಮಿ 5' ಮೊದಲ ಸೇಲ್‌ಗೆ ಕೌಂಡೌನ್ ಶುರು!.ಆಫರ್ ಏನು?
ಇತ್ತೀಚಿಗೆ ರಿಯಲ್ ಮಿ ಕಂಪನಿಯು ರಿಯಲ್ ಮಿ 5 ಮತ್ತು ರಿಯಲ್ ಮಿ 5 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ 'ರಿಯಲ್ ಮಿ 5' ಸ್ಮಾರ್ಟ್‌ಫೋನಿನ ಮೊದಲ ಸೇಲ್ ಇಂದು (ಅಗಷ್ಟ್ 27) ಮಧ್ಯಾಹ್ನ 12ರ ನಂತರ ನಡೆಯಲಿದೆ. ಈ ಸ್ಮಾರ್ಟ್‌ಫೋನ್ ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಹಲವು ಆಫರ್‌ಗಳ ಸಹ ದೊರೆಯಲಿವೆ.

ಹೌದು, ರಿಯಲ್ ಮಿ ಸಂಸ್ಥೆಯ ಸದ್ಯದ ಟ್ರೆಂಡಿಂಗ್ ಸ್ಮಾರ್ಟ್‌ಫೋನ್ 'ರಿಯಲ್ ಮಿ 5' ಭಾರತದಲ್ಲಿಂದು ಫಸ್ಟ್ ಸೇಲ್ ಶುರುವಾಗಲು ಕ್ಷಣಗಣನೆ ಆರಂಭವಾಗಿದ್ದು, ಸ್ಮಾರ್ಟ್‌ಫೋನ್ ಪ್ರಿಯರು ಫ್ಲಿಪ್‌ಕಾರ್ಟ್‌ನತ್ತ ಎದುರು ನೋಡುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್ ಮೂರು ವೇರಿಯಂಟ್‌ಗಳಲ್ಲಿ ಲಾಂಚ್ ಆಗಿದ್ದು, ಅವುಗಳು 3GB + 32GB (9,999ರೂ) , 4GB + 64GB (10,499ರೂ) ಮತ್ತು 4GB RAM + 128GB (11,999ರೂ) ಆಗಿವೆ.

ಕ್ರಿಸ್ಟಲ್ ಬ್ಲೂ ಮತ್ತು ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದ್ದು, ನೋ ಕಾಸ್ಟ್ ಇಎಮ್‌ಐ ಆಯ್ಕೆಯು ಗ್ರಾಹಕರಿಗೆ ದೊರೆಯಲಿದೆ. ಇದರೊಂದಿಗೆ ಆಕ್ಸಸ್ ಬ್ಯಾಂಕ್ ಕ್ರೆಡಿಟ್ ಗ್ರಾಹಕರಿಗೆ ಶೇ.5% ಕ್ಯಾಶ್‌ಬ್ಯಾಕ್ ಸೌಲಭ್ಯವು ಸಹ ದೊರೆಯಲಿದೆ. ಗ್ರಾಹಕರು ಫ್ಲಿಪ್‌ಕಾರ್ಟ್ ಮತ್ತು ರಿಯಲ್ ಮಿ ವೆಬ್‌ಸೈಟ್ ಮೂಲಕ ಖರೀದಿಸಬಹುದಾಗಿದೆ. ಹಾಗಾದರೇ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೆನು ಎನ್ನುವುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್ ಮಿ 5 ಡಿಸ್‌ಪ್ಲೇ
ರಿಯಲ್ ಮಿ 5 ಸ್ಮಾರ್ಟ್‌ಫೋನ್ 720×1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ವಿಶಾಲ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ನೀಡಲಾಗಿದ್ದು, ಅಂಚು ರಹಿತ ಮತ್ತು ಮಿನಿಡ್ರಾಪ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 164.4x75.6x9.3mm ಸುತ್ತಳತೆಯನ್ನು ಪಡೆದಿದ್ದು, ಅತ್ಯುತ್ತಮ ವೀಕ್ಷಣೆಯ ಅನುಭೂತಿ ನೀಡಲಿದೆ.

ರಿಯಲ್ ಮಿ 5 ಪ್ರೊಸೆಸರ್
ರಿಯಲ್ ಮಿ 5 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರ ಪ್ರೊಸೆಸರ್ ವೇಗವು 2.0Ghz ಆಗಿದ್ದು, ಪ್ರೊಸೆಸರ್ ವೇಗಕ್ಕೆ ಆಂಡ್ರಾಯ್ಡ್ 9 ಪೈ ಓಎಸ್ ಬೆಂಬಲವಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 3GB + 32GB ಸ್ಟೋರೇಜ್, 4GB + 64GB ಸ್ಟೋರೇಜ್ ಮತ್ತು 4GB + 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ರಿಯಲ್ ಮಿ 5 ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ನೀಡಲಾಗಿದ್ದು, ಪ್ರಾಥಮಿಕ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 12ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಅಲ್ಟ್ರಾವೈಲ್ಡ್ ಆಂಗಲ್ ಸೆನ್ಸಾರ್‌ನಲ್ಲಿದ್ದು, ಹಾಗೆಯೇ ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಸಾಮರ್ಥ್ಯದೊಂದಿಗೆ ಡೆಪ್ತ್ ಮತ್ತು ಮಾಕ್ರೋ ಮೋಡ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, AI ಬ್ಯೂಟಿ ಮೋಡ್ ಹೊಂದಿದೆ.

ರಿಯಲ್ ಮಿ 5 ಬ್ಯಾಟರಿ ಬಲ
ರಿಯಲ್ ಮಿ 5 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಶಕ್ತಿಯುತ ಬ್ಯಾಟರಿಯನ್ನು ಪಡೆದಿದ್ದು, ಸ್ಮಾರ್ಟ್‌ಫೋನ್‌ಗೆ ದೀರ್ಘಕಾಲದ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಿದೆ. ಇದರೊಂದಿಗೆ 10W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದ್ದು, ಸ್ಮಾರ್ಟ್‌ಫೋನ್‌ಗೆ ವೇಗವಾಗಿ ಚಾರ್ಜ್ ಒದಗಿಸಲಿದೆ. ನಿರಂತರ 30ಗಂಟೆಗಳ ಮ್ಯೂಸಿಕ್ ಪ್ಲೇ ಬ್ಯಾಕ್ ಸಾಮರ್ಥ್ಯ ಒಳಗೊಂಡಿದೆ.

ಲಭ್ಯತೆ ಮತ್ತು ಬೆಲೆ
ರಿಯಲ್ ಮಿ 5 ಸ್ಮಾರ್ಟ್‌ಫೋನ್ ಮೂರು ವೇರಿಯಂಟ್‌ನಲ್ಲಿ ಬಿಡುಗಡೆ ಆಗಿದ್ದು, 3GB + 32GB ವೇರಿಯಂಟ್ ಬೆಲೆಯು 9,999ರೂ.ಗಳು, 4GB + 64GB ವೇರಿಯಂಟ್ ಬೆಲೆಯು 10,999ರೂ.ಗಳು ಮತ್ತು 4GB + 128GB ವೇರಿಯಂಟ್ ಬೆಲೆಯು 11,999ರೂ.ಗಳು ಆಗಿದೆ. ಗ್ರಾಹಕರು ಫ್ಲಿಪ್‌ಕಾರ್ಟ್ ಮತ್ತು ರಿಯಲ್ ಮಿ ವೆಬ್‌ಸೈಟ್ ಮೂಲಕ ಖರೀದಿಸಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470