Home
ಸುದ್ದಿಜಾಲ

'ರಿಯಲ್‌ ಮಿ 5i' ಸ್ಮಾರ್ಟ್‌ಫೋನ್‌ ಇದೀಗ ಓಪೆನ್ ಸೇಲ್‌ನಲ್ಲಿ ಲಭ್ಯ!

ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ 'ರಿಯಲ್‌ ಮಿ 5i' ಸ್ಮಾರ್ಟ್‌ಫೋನ್‌ ಖರೀದಿಸಲು ಗ್ರಾಹಕರು ಯಾವುದೇ ಫ್ಲ್ಯಾಶ್‌ ಸೇಲ್‌ಗಾಗಿ ಅಥವಾ ವಿಶೇಷ ಸೇಲ್ ಮೇಳಕ್ಕಾಗಿ ಕಾಯುವ ಅಗತ್ಯ ಇಲ್ಲ. ಏಕೆಂದರೇ 'ರಿಯಲ್‌ ಮಿ' ತಾಣ ಮತ್ತು ಫ್ಲಿಪ್‌ಕಾರ್ಟ್‌ ತಾಣಗಳಲ್ಲಿ 'ರಿಯಲ್‌ ಮಿ 5i' ಸ್ಮಾರ್ಟ್‌ಫೋನ್‌ ಇದೀಗ ಓಪೆನ್ ಸೇಲ್ ನಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 8,999ರೂ ಆಗಿದೆ.

ರಿಯಲ್‌ ಮಿ 5i ಸ್ಮಾರ್ಟ್‌ಫೋನ್

ಹೌದು, ಕ್ವಾಡ್‌ ಕ್ಯಾಮೆರಾ, 5,000mAh ಬ್ಯಾಟರಿ, 6.52 ಇಂಚಿನ ಬಿಗ್ ಡಿಸ್‌ಪ್ಲೇ, ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಸೌಲಭ್ಯಗಳಿಂದ ಗ್ರಾಹಕರನ್ನು ಆಕರ್ಷಿಸಿರುವ ರಿಯಲ್‌ ಮಿ 5i ಸ್ಮಾರ್ಟ್‌ಫೋನ್ ಈಗ ಖರೀದಿಗೆ ಮುಕ್ತವಾಗಿದೆ. ಗ್ರೀನ್‌ ಫಾರೆಸ್ಟ್‌ ಮತ್ತು ಅಕ್ವಾ ಬ್ಲೂ ಬಣ್ಣಗಳ ಆಯ್ಕೆಗಳನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ಡಿಸೈನ್ ಸಹ ಆಕರ್ಷಕವಾಗಿದೆ. ಹಾಗಾದರೆ ರಿಯಲ್‌ ಮಿ 5i ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಹೇಗಿವೆ ಅನ್ನೊದನ್ನು ಸ್ಕ್ರಾಲ್ ಮಾಡಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 480 nits ಬ್ರೈಟ್ನೆಸ್‌ ಹೊಂದಿದ್ದು, ಮಿನಿ ವಾಟರ್ ಡ್ರಾಪ್ ನಾಚ್ ಮಾದರಿಯನ್ನು ಪಡೆದಿದೆ. ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.89% ಆಗಿದೆ. ಗೊರಿಲ್ಲಾ 3 ಗ್ಲಾಸ್‌ ಒದಗಿಸಲಾಗಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 9 ಪೈ ಹಾಗೂ ಕಲರ್ ಓಎಸ್‌ 6.1 ಕೆಲಸ ಮಾಡಡುತ್ತವೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯ ಮತ್ತು 64GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ.

ಕ್ವಾಡ್ ಕ್ಯಾಮೆರಾ ಸ್ಪೆಷಲ್

ಕ್ವಾಡ್ ಕ್ಯಾಮೆರಾ ಸ್ಪೆಷಲ್

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 12ಎಂಪಿ ಸೆನ್ಸಾರ್ ನಲ್ಲಿರಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು f/2.25 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್‌ ಹಾಗೂ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನ ಡೆಪ್ತ್ ಹಾಗೂ ಮೈಕ್ರೋ ಲೆನ್ಸ್‌ ಸಾಮರ್ಥ್ಯದಲ್ಲಿರಲಿವೆ. 13ಎಂಪಿಯ ಸೆಲ್ಫಿ ಕ್ಯಾಮೆರಾ ಇರಲಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರೊಂದಿಗೆ ವೈಫೈ-802.11ac, ಜಿಪಿಎಸ್‌, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಭಾರತದಲ್ಲಿ 'ರಿಯಲ್ ಮಿ 5i' ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ ಮಿ ತಾಣದಲ್ಲಿ ಓಪೆನ್‌ ಸೇಲ್ ಆರಂಭಿಸಿದೆ. 4GB RAM ಮತ್ತು 64GB ವೇರಿಯಂಟ್ ಆಯ್ಕೆಯನ್ನು ಹೊಂದಿದ್ದು, 8,999ರೂ. ಆಗಿದೆ. ಫಾರೆಸ್ಟ್ ಗ್ರೀನ್ ಮತ್ತು ಅಕ್ವಾ ಬ್ಲೂ ಬಣ್ಣಗಳ ಆಯ್ಕೆ ಬಣ್ಣಗಳ ಆಯ್ಕೆ ಇದೆ.

Best Mobiles in India

English summary
Consumers can purchase the Realme 5i at anytime from Flipkart and Realme.com. The smartphone is available on open sale on both platforms. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+