ಇಂದು 'ರಿಯಲ್ ಮಿ 5S' ಫಸ್ಟ್ ಸೇಲ್!..ಬೆಲೆ 9,999ರೂ.!
'ರಿಯಲ್ ಮಿ' ಕಂಪನಿಯು ಇತ್ತೀಚಿಗೆ ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿರುವ 'ರಿಯಲ್ ಮಿ 5' ಸ್ಮಾರ್ಟ್‌ಫೋನ್ ಇಂದು ಮೊದಲ ಫ್ಲ್ಯಾಶ್ ಸೇಲ್ ಆರಂಭಿಸಲಿದೆ. ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಮಧ್ಯಾಹ್ನ 12ಗಂಟೆ ಯಿಂದ ಗ್ರಾಹಕರ ಖರೀದಿಗೆ ರಿಯಲ್ ಮಿ 5s ಸ್ಮಾರ್ಟ್‌ಫೋನ್ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 9,999ರೂ.ಗಳಾಗಿದೆ.

ಹೌದು, ರಿಯಲ್ ಮಿ ಸಂಸ್ಥೆಯು 'ರಿಯಲ್ ಮಿ 5S' ಸ್ಮಾರ್ಟ್‌ಫೋನಿ ಫಸ್ಟ್ ಸೇಲ್ ಇಂದು(ನವೆಂಬರ್ 29) ಭಾರತದಲ್ಲಿ ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಪವರ್, ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್ ಮತ್ತು 48ಎಂಪಿ ರಿಯರ್ ಕ್ಯಾಮೆರಾ ಫೀಚರ್ಸ್‌ಗಳಿಂದ ಗ್ರಾಹಕರನ್ನುಆಕರ್ಷಿಸಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 'ರಿಯಲ್ ಮಿ' ತಾಣ ಮತ್ತು 'ಫ್ಲಿಪ್‌ಕಾರ್ಟ್' ತಾಣಗಳಲ್ಲಿ ಖರೀದಿಗೆ ದೊರೆಯಲಿದೆ. ಹಾಗಾದರೇ ರಿಯಲ್ ಮಿ ಸಂಸ್ಥೆಯ 'ರಿಯಲ್ ಮಿ 5S' ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
'ರಿಯಲ್ ಮಿ 5S' ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 3+ ರಕ್ಷಣೆಯನ್ನು ಪಡೆದಿದೆ. ಡಿಸ್‌ಪ್ಲೇಯಿಂದ ಬಾಹ್ಯ ಬಾಡಿಯ ನಡುವಿನ ಅನುಪಾತವು 89% ಪರ್ಸೆಂಟ್ ಆಗಿದ್ದು, ಡಿಸ್‌ಪ್ಲೇಯ ಪ್ರಖರತೆಯು ಉತ್ತಮವಾಗಿದೆ. ವಿಡಿಯೊ ವೀಕ್ಷಣೆಗೆ ಮತ್ತು ಗೇಮ್ಸ್‌ಗೆ ಬೆಸ್ಟ್ ಅನಿಸುವಂತಿದೆ.

ಪ್ರೊಸೆಸರ್ ಸಾಮರ್ಥ್ಯ
'ರಿಯಲ್ ಮಿ 5S' ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್ ಸಪೋರ್ಟ್ ನೀಡಲಾಗಿದೆ. ಹಾಗೂ ColorOS 6.1 ಬೆಂಬಲ ಸಹ ಇದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 4GB RAM + 128GB ವೇರಿಯಂಟ್ ಸಾಮರ್ಥ್ಯದ ಎರಡು ಆಯ್ಕೆಗಳನ್ನು ಹೊಂದಿದೆ.

ಕ್ಯಾಮೆರಾ ಸ್ಪೆಷಲ್
'ರಿಯಲ್ ಮಿ 5S' ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು f/2.5 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್‌ನಲ್ಲಿದ್ದು, ತೃತೀಯ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾಗಳು 2ಎಂಪಿಯ ಸೆನ್ಸಾರ್ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಎಚ್‌ಆರ್‌ಡಿ, AI ಬ್ಯುಟಿಫಿಕೇಶನ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಪವರ್
'ರಿಯಲ್ ಮಿ 5S' ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಸಾಮರ್ಥ್ಯ ಪಡೆದಿದ್ದು, ಇದರೊಂದಿಗೆ ಅತ್ಯುತ್ತಮ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಈ ಪೋನ್ 12ಗಂಟೆಗಳ ವಿಡಿಯೊ ಪ್ಲೇಬ್ಯಾಕ್ ಮತ್ತು 718 ಗಂಟೆಗಳ ಬ್ಯಾಟರಿ ಸ್ಟ್ಯಾಂಡ್‌ಬೈ ಸಾಮರ್ಥ್ಯವನ್ನು ಪಡೆದಿದೆ ಎಂದು ಕಂಪನಿಯು ಹೇಳಿಕೊಂಡಿದೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಕಂಪಾಸ್, ಬ್ಲೂಟೂತ್, ವೈಫೈ, ಜಿಎಸ್‌ಪಿ, ಸೇರಿದಂತೆ ಅಗತ್ಯ ಫೀಚರ್ಸ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ 'ರಿಯಲ್ ಮಿ 5S' ಸ್ಮಾರ್ಟ್‌ಫೋನ್ ಎರಡು ವೇರಿಯಂಟ್‌ಗಳಲ್ಲಿ ಬಿಡುಗಡೆ ಆಗಿದೆ. ಆರಂಭಿಕ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 9,999ರೂ.ಗಳಾಗಿದ್ದು, ಹಾಗೂ 4GB RAM + 256GB ವೇರಿಯಂಟ್ ಬೆಲೆಯು 10,999.ಗಳಾಗಿದೆ. ಇಂದು (ನವೆಂಬರ್ 29ರಂದು) ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ತಾಣದಲ್ಲಿ ಲಭ್ಯವಾಗಲಿ ಮೊದಲ ಸೇಲ್ ನಡೆಸಲಿದೆ.


Click it and Unblock the Notifications








