ಇಂದು 'ರಿಯಲ್‌ ಮಿ 6 ಪ್ರೊ' ಫೋನಿನ ಫಸ್ಟ್ ಸೇಲ್!..ಬೆಲೆ 16,999ರೂ.!

|

ಚೀನಾ ಮೂಲದ ರಿಯಲ್ ಮಿ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ 'ರಿಯಲ್‌ ಮಿ 6 ಪ್ರೊ' ಸ್ಮಾರ್ಟ್‌ಫೋನ್ ಮೀಡ್‌ರೇಂಜ್‌ ಬೆಲೆಯಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾ.13) ಮೊದಲ ಬಾರಿ ಸೇಲ್ ಆರಂಭಿಸಲಿದೆ. ಗ್ರಾಹಕರು ಇಂದು ಮಧ್ಯಾಹ್ನ 12ರ ನಂತರ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ಅಧಿಕೃತ ರಿಯಲ್‌ ಮಿ ವೆಬ್‌ಸೈಟ್‌ ಮೂಲಕ ಖರೀದಿಸಬಹುದಾಗಿದೆ. ಆರಂಭಿಕ ಬೆಲೆಯು 16,999ರೂ. ಆಗಿದೆ.

ರಿಯಲ್‌ ಮಿ 6 ಪ್ರೊ

ಹೌದು, ರಿಯಲ್ ಮಿ ಸಂಸ್ಥೆಯು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಧ್ಯಾಹ್ನ 12ಕ್ಕೆ ಇಂದು ಫಸ್ಟ್‌ ಟೈಮ್ ತನ್ನ ರಿಯಲ್‌ ಮಿ 6 ಪ್ರೊ ಸ್ಮಾರ್ಟ್‌ಫೋನ್‌ ಮಾರಾಟ ಪ್ರಾರಂಭಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆ, ಮೀಡಿಯಾ ಟೆಕ್ G90T ಪ್ರೊಸೆಸರ್, 30W ಫಾಸ್ಟ್‌ ಚಾರ್ಜಿಂಗ್ ಹಾಗೂ 90Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ನಂತಹ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಹಾಗೆಯೇ ದೇಶಿ ನಿರ್ಮಿತ ನ್ಯಾವಿಕ್ ಜಿಪಿಎಸ್‌ ತಂತ್ರಜ್ಞಾನ ಹೊಂದಿದೆ. ರಿಯಲ್‌ ಮಿ 6 ಪ್ರೊ ಫೋನಿನ ಇನ್ನುಳಿದ ಫೀಚರ್ಸ್‌ಗಳ ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ ಮಿ 6 ಪ್ರೊ ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಹೊಂದಿದೆ. ಇದರೊಂದಿಗೆ ಡಿಸ್‌ಪ್ಲೇಯು 90Hz ರಿಫ್ರೇಶ್‌ ರೇಟ್ ಸಾಮರ್ಥ್ಯವನ್ನು ಪಡೆದಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ. 90.6% ಆಗಿದೆ. ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಯ ಇದ್ದು, ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಅನ್ನು ಹೊಂದಿದೆ.

ಪ್ರೊಸೆಸರ್ ಬಲ

ಪ್ರೊಸೆಸರ್ ಬಲ

ರಿಯಲ್‌ ಮಿ 6 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಮತ್ತು ರಿಯಲ್ ಮಿ UI ಬೆಂಬಲ ಪಡೆದಿದೆ. 6GB+64GB, 6GB + 128GB ಮತ್ತು 8RAM + 128GB, ಆಂತರಿಕ ಸ್ಟೋರೇಜ್ನ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒದಗಿಸಲಾಗಿದೆ.

ಕ್ವಾಡ್‌ ಕ್ಯಾಮೆರಾ ವಿಶೇಷ

ಕ್ವಾಡ್‌ ಕ್ಯಾಮೆರಾ ವಿಶೇಷ

ರಿಯಲ್‌ ಮಿ 6 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಕ್ಯಾಮೆರಾ 8ಎಂಪಿ ಸೆನ್ಸಾರ್ ಹಾಗೂ ನಾಲ್ಕನೇ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದೆ. ಸೆಲ್ಫಿ ಕ್ಯಾಮೆರಾವು ಡ್ಯುಯಲ್ ಪಂಚ್ ಹೋಲ್ ಕ್ಯಾಮೆರಾ ಹೊಂದಿದ್ದು, ಅವುಗಳು 16ಎಂಪಿ ಮತ್ತು 8ಎಂಪಿ ಸೆನ್ಸಾರ್‌ನಲ್ಲಿವೆ. ಸ್ಲೋ ಮೋಷನ್ ವಿಡಿಯೊ, ಟ್ರೈಪಾಡ್‌ ಮೋಡ್, ಅಲ್ಟ್ರಾ ನೈಟ್‌ ಸ್ಕೆಪ್ ಮೋಡ್, ಎಕ್ಸ್‌ಪರ್ಟ್ ಮೋಡ್ ಹಾಗೂ ಫ್ರೇಮ್ ಸ್ಥಿರತೆಯ ಫೀಚರ್ ಹೊಂದಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ರಿಯಲ್‌ ಮಿ 6 ಪ್ರೊ ಸ್ಮಾರ್ಟ್‌ಫೋನ್ 4300mAh ಸಾಮರ್ಥ್ಯವನ್ನು ಹೊಂದಿದ್ದು, 30W ಸಾಮರ್ಥ್ಯದ ಫ್ಲ್ಯಾಶ್‌ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿದೆ. ಅಲ್ಟ್ರಾ ಕಿನರ್ ಸೌಂಡ್ ಸ್ಪೀಕರ್, ಪ್ಲೇಪುಲ್ ಫೀಚರ್ಸ್‌, ವೈಫೈ, ಬ್ಲೂಟೂತ್, ಪರ್ಸನೆನಲ್ ಮಾಹಿತಿ ರಕ್ಷಣೆ, ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಇಡಲು DocValt ಆಯ್ಕೆ, ವಿಡಿಯೊ ಎಡಿಟಿಂಗ್ ಆಪ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ ಮಿ 6 ಪ್ರೊ ಸ್ಮಾರ್ಟ್‌ಫೋನ್ ಮೂರು ವೇರಿಯಂಟ್‌ಗಳಲ್ಲಿ ಬಿಡುಗಡೆ ಆಗಿದೆ. ಆರಂಭಿಕ 6GB+64GB ವೇರಿಯಂಟ್ ಬೆಲೆಯು 16,999 ಆಗಿದೆ. ಹಾಗೆಯೇ 6GB + 128GB ವೇರಿಯಂಟ್ ಬೆಲೆಯು 17,999ರೂ. ಆಗಿದ್ದು, 8RAM + 128GB ಸ್ಟೋರೇಜ್‌ನ ಹೈ ಎಂಡ್ ವೇರಿಯಂಟ್‌ ಬೆಲೆಯು 17,999ರೂ. ಆಗಿದೆ. ಇಂದು (ಮಾರ್ಚ್ 13) ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Realme 6 Pro price in India is set at Rs 16,999. Buyers can get the latest Realme phone via Flipkart and Realme.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X