ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ರಿಯಲ್‌ಮಿ 6 ಸ್ಮಾರ್ಟ್‌ಫೋನ್‌ !

|

ಚೀನಾ ಮೂಲದ ರಿಯಲ್‌ ಮಿ ಕಂಪೆನಿ ಸ್ಮಾರ್ಟ್‌ಫೋನ್‌ ವಲಯದಲ್ಲಿ ದಿನದಿಂದ ದಿನಕ್ಕೆ ಸಿಕ್ಕಾಪಟ್ಟೆ ಸೌಂಡ್‌ ಮಾಡ್ತಾ ಇದೆ. ಮಾರುಕಟ್ಟೆಗೆ ಪ್ರವೇಶಿಸಿದ ದಿನದಿಂದಲೇ ಸ್ಮಾರ್ಟ್‌ಫೋನ್‌ ವಲಯದಲ್ಲಿ ಏರುಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿರುವ ರಿಯಲ್‌ಮಿ ಕಂಪೆನಿ ಇತರೆ ಕಂಪೆನಿಗಳಿಗೆ ಸೆಡ್ಡು ಹೊಡೆಯುತ್ತಾ ಸಾಗಿದೆ. ಸ್ಮಾರ್ಟ್‌ಫೋನ್‌ ಇತರೆ ಮೊಬೈಲ್‌ ಅಕ್ಸಸರೀಸ್‌ಗಳನ್ನು ಸಹ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಸದ್ಯ ಕೆಲ ದಿನಗಳ ಹಿಂದೆ ಅಷ್ಟೇ ರಿಯಲ್‌ಮಿ X50 PRO ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದ ಕಂಪೆನಿ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮುಂದಾಗಿದೆ.

ಹೌದು

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ಆವೃತ್ತಿಯ ರಿಯಲ್‌ಮಿ 6 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಮಾರುಕಟ್ಟೆಗೆ ಪ್ರವೇಶಿಸಲಿದೆ ಅನ್ನೊ ಸುಳಿವನ್ನ ರಿಯಲ್‌ಮಿ ಸಿಇಒ ಮಾಧವ್‌ ಶೇಠ್‌ ತಮ್ಮ ಟ್ವಿಟ್ಟರ್‌ ಮೂಲಕ ತಿಳಿಸಿದ್ದಾರೆ. ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ಖಾನ್‌ ಅವರ ಜೊತೆಗಿನ ಫೋಟೋ ಹಂಚಿಕೊಂಡಿರುವ ಮಾಧವ್‌ ಶೇಠ್‌ ರಿಯಲ್‌ಮಿ 6 ಸ್ಮಾರ್ಟ್‌ಫೋನ್‌ ಬಗ್ಗೆ ಹೇಳಿಕೊಂಡಿದ್ದಾರೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಈ ಸ್ಮಾರ್ಟ್‌ಫೋನ್‌ ಎಷ್ಟು ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎಂಬ ಮಾಹಿತಿ ಲಭ್ಯವಿಲ್ಲವಾದರೂ ಈ ಡಿಸ್‌ಪ್ಲೇ ಅತಿ ಕಡಿಮೆ ಅಂಚಿನಿಂದ ಕೂಡಿರುವ ಡಿಸ್‌ಪ್ಲೇ ಆಗಿರಲಿದೆ. ಅಲ್ಲದೆ ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಸ್ಕ್ರೀನ್‌ ಪ್ಯಾನೆಲ್‌ ಅನ್ನು ಒಳಗೊಂಡಿದೆ ಎಂದು ಹೇಳಲಾಗ್ತಿದೆ. ಇನ್ನು ಟ್ವೀಟ್‌ನಲ್ಲಿ ಎಂಟರ್‌ಟೈನ್‌ಮೆಂಟ್‌ ವರ್ಲ್ಡ ಎಂಬ ಪದವನ್ನ ಬಳಕೆ ಮಾಡಿರುವುದನ್ನ ಗಮನಿಸಿದರೆ ಈ ಸ್ಮಾರ್ಟ್‌ಫೋನ್‌ ಎಂಟರ್‌ಟೈನ್‌ಮೆಂಟ್‌ಗೆ ಸಂಬಂಧಪಟ್ಟಂತೆ ಉತ್ತಮ ಅನುಭವವನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರಿಯಲ್‌ಮಿ 6 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G90T ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ರಿಯಲ್‌ಮಿ 6, 4GB RAM ಮತ್ತು 64GB ಇಂಟರ್‌ಸ್ಟೋರೇಜ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದ್ದು, ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯದ ಬಗ್ಗೆ ಕಂಪೆನಿ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ. ಅಲ್ಲದೆ ಇನ್ನು ಉಳಿದ ಮೂರು ಕ್ಯಾಂಎರಾಗಳು ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಡೆಪ್ತ್‌ ಸೆನ್ಸಾರ್‌ ಲೆನ್ಸ್‌, ಮ್ಯಾಕ್ರೋ ಲೆನ್ಸ್‌, ಪೋರ್ಟ್ರೇಟ್ ಶೂಟ್‌ ಲೆನ್ಸ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದ್ದು, ಇವುಗಳ ಮೆಗಾಪಿಕ್ಸೆಲ್‌ ಸೆನ್ಸಾರ್‌ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಜೊತೆಗೆ ಉತ್ತಮ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗ್ತಿದ್ದು, ಇದರ ಮೆಗಾಪಿಕ್ಸೆಲ್‌ ಸಾಮರ್ಥ್ಯದ ಬಗ್ಗೆಯೂ ಕಂಪೆನಿ ಮಾಹಿತಿಯನ್ನ ಬಿಟ್ಟುಕೊಟ್ಟಿಲ್ಲ.

ಬ್ಯಾಟರಿ ಸಾಮರ್ಥ್ಯ

ಬ್ಯಾಟರಿ ಸಾಮರ್ಥ್ಯ

ರಿಯಲ್‌ಮಿ 6 ಸ್ಮಾರ್ಟ್‌ಫೋನ್‌ ದೊಡ್ಡ ಗಾತ್ರದ ಬ್ಯಾಟರಿಯನ್ನ ಪ್ಯಾಕ್‌ಅಪ್‌ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದ್ದು, ಇದು 5000mAh ಸಾಮರ್ಥ್ಯ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಅಲ್ಲದೆ ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ಊಹಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌-ಸಿ ಪೋರ್ಟ್‌ ಮತ್ತು 3.5mm ಹೆಡ್‌ಫೋನ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ 10,999ರೂ ಬೆಲೆಯನ್ನ ಹೊಂದಿರಲಿದೆ ಎನ್ನಲಾಗ್ತಿದ್ದು, ಇದೇ ಮಾರ್ಚ್‌ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವ ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಧಿಕೃತವಾಗಿ ಯಾವ ಮಾರಾಟ ಮಳಿಗೆಗಳಲ್ಲಿ ಖರೀದಿಸಬಹುದಾಗಿದೆ ಅನ್ನೊದರ ಬಗ್ಗೆ ಕಂಪೆನಿ ಯಾವುದೇ ಮಾಹಿತಿಯನ್ನ ಬಿಟ್ಟುಕೊಟ್ಟಿಲ್ಲ.

Best Mobiles in India

English summary
Realme 6 is expected to launch in India soon according to a new tweet by CEO Madhav Sheth.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X