ಬಹು ನಿರೀಕ್ಷಿತ ರಿಯಲ್‌ಮಿ 6 ಸ್ಮಾರ್ಟ್‌ಫೋನ್ ಲಾಂಚ್!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ರಿಯಲ್‌ಮಿ ಈಗಾಗ್ಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಇದೀಗ ಬಹುನಿರೀಕ್ಷಿತ ರಿಯಲ್‌ಮಿ 6 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಭಾರತದಲ್ಲಿ ಬಿಡುಗಡೆ ಮಾಡಿದೆ. ಪ್ರತಿ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳಲ್ಲೂ ಹೊಸತನದ ಫೀಚರ್ಸ್‌ಗಳನ್ನ ಪರಿಚಯಿಸುತ್ತಿರುವ ರಿಯಲ್ ಮಿ ಇದೀಗ ತನ್ನ ರಿಯಲ್‌ಮಿ 6 ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸೂಚನೆಯನ್ನ ನೀಡಿದೆ.

ಹೌದು, ಇತ್ತೀಚಿನ ದಿನಗಳಲ್ಲಿ ಟೆಕ್ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿರುವ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ 6 ಹಾಗೂ 6 ಪ್ರೊ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಇನ್ನು ರಿಯಲ್‌ಮಿ 6 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G90T ಪ್ರೊಸೆಸರ್ ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 1080 X 2400 ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಪಂಚ್‌ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದರ ಬಾಡಿ ಟು ಸ್ಕ್ರೀನ್ ನಡುವಿನ ಅನುಪಾತ 90.5% ರಷ್ಟಿದೆ. ಇನ್ನು ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಅನ್ನು ನೀಡಲಾಗಿದೆ. ಅಲ್ಲದೆ ಈ ಡಿಸ್‌ಪ್ಲೇ 90hz ರಿಫ್ರೇಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಇದರ ರಚನೆಯ ಅನುಪಾತ 20:9 ಆಗಿದೆ.

ಪ್ರೊಸೆಸರ್
ರಿಯಲ್‌ಮಿ 6 ಸ್ಮಾರ್ಟ್‌ಫೋನ್ ಮೀಡಿಯಾ ಹಿಲಿಯೋ G90T ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 128GB, 6GBRAM ಮತ್ತು 128 GB, ಹಾಗೂ 4GBRAM ಮತ್ತು 64GB ಸಾಮರ್ಥ್ಯದ ಆಂತರಿಕ ಮೆಮೊರಿ ಹೊಂದಿರುವ ವೇರಿಯೆಂಟ್ ಆಯ್ಕೆಗಳನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವೆರೆಗೆ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಶೂಟರ್ ಲೆನ್ಸ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದು ಸ್ಯಾಮ್‌ಸಂಗ್ GW1 ಇಮೇಜ್ ಸೆನ್ಸಾರ್ ಅನ್ನು ಒಳಗೊಂಡಿದ್ದು, 20x ಜೂಮ್ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 6 ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 30W ಫ್ಲ್ಯಾಶ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈಫೈ, ಬ್ಲೂಟೂತ್ v5.0, GPS, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸೆಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಮ್ಯಾಗ್ನೆಟೊಮೀಟರ್, ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಭಾರತದಲ್ಲಿ ರಿಯಲ್‌ಮಿ 6 ಸ್ಮಾರ್ಟ್‌ಫೋನ್ 4GB RAM ಮತ್ತು 64GB ಶೇಖರಣಾ ಆವೃತ್ತಿಯ ಬೆಲೆ 12,999 ರೂ. 6GB RAM ಮತ್ತು 64GB ಸ್ಟೋರೇಜ್ ಆವೃತ್ತಿಯ ಬೆಲೆ 14,999.ರೂ. ಮತ್ತು 8GB RAM ಮತ್ತು128GB ಶೇಖರಣಾ ಆಯ್ಕೆಯ ಸ್ಮಾರ್ಟ್‌ಫೋನ್ ಬೆಲೆ 15,999 ರೂ. ಆಗಿದೆ. ಇದಲ್ಲದೆ, ಈ ಸ್ಮಾರ್ಟ್‌ಫೋನ್ ಕಾಮೆಟ್ ಬ್ಲೂ ಮತ್ತು ಕಾಮೆಟ್ ವೈಟ್ ಕಲರ್ ಆಯ್ಕೆಗಳಲ್ಲಿಲಭ್ಯವಾಗಲಿದ್ದು, ಇದೇ ಮಾರ್ಚ್ 11 ರಿಂದ ಮಧ್ಯಾಹ್ನ 12 ಗಂಟೆಯ ನಂತರ ಮಾರಾಟವಾಗಲಿದೆ.


Click it and Unblock the Notifications








