ಇಂದು ರಿಯಲ್‌ ಮಿ 6i ಸ್ಮಾರ್ಟ್‌ಫೋನ್ ಸೇಲ್‌!..ಬೆಲೆ 12,999ರೂ.!

|

ರಿಯಲ್‌ಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ರಿಯಲ್‌ಮಿ 6i ಸ್ಮಾರ್ಟ್‌ಫೋನಿನ ಸೇಲ್‌ ಇಂದು ಭಾರತದಲ್ಲಿ ನಡೆಯಲಿದೆ. ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿಯ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 12ರಂದು ಮಾರಾಟ ಪ್ರಾರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 12,999ರೂ.ಗಳು ಆಗಿದೆ.

ರಿಯಲ್‌ಮಿ 6i

ಹೌದು, ರಿಯಲ್‌ಮಿ ಕಂಪೆನಿಯ ರಿಯಲ್‌ಮಿ 6i ಸ್ಮಾರ್ಟ್‌ಫೋನ್‌ ಇಂದು (ಜು.31) ಮೊದಲ ಸೇಲ್‌ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್‌ 4GB + 64GB ಮತ್ತು 6GB + 64GB ಆಂತರಿಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G90 ಪ್ರೊಸೆಸರ್‌ ಅನ್ನು ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ. ಇನ್ನು ರಿಯಲ್‌ ಮಿ 6i ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ ಮಿ 6i ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು LCD ಮಾದರಿಯಲ್ಲಿ ಇದ್ದು, ಪಂಚ್‌ಹೋಲ್ ವಿನ್ಯಾಸ ಪಡೆದಿದೆ. ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅನುಪಾತ 90.5% ಆಗಿದ್ದು, 90Hz ಸಾಮರ್ಥ್ಯ ಪಡೆದಿದೆ. ಗೊರಿಲ್ಲಾ ಗ್ಲಾಸ್ ಸಪೋರ್ಟ್ ಇದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ರಿಯಲ್‌ ಮಿ 6i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G90 ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 10 ಓಎಸ್‌ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯ ಮತ್ತು 64GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ ಮಿ 6i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿರಲಿದ್ದು, ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ನಲ್ಲಿರಲಿವೆ. ಹಾಗೆಯೇ 16ಎಂಪಿಯ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ರಿಯಲ್‌ ಮಿ 6i ಸ್ಮಾರ್ಟ್‌ಫೋನ್ 4300mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 30W ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್‌, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ?

ಬೆಲೆ?

ರಿಯಲ್‌ ಮಿ 6i ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದೆ. ಬೇಸ್‌ ವೇರಿಯಂಟ್ 4GB + 64GB ಬೆಲೆಯು 12,999ರೂ. ಆಗಿದೆ. ಮತ್ತು 6GB + 64GB ಬೆಲೆಯು 14,999ರೂ. ಆಗಿದೆ.

Best Mobiles in India

English summary
Realme 6i 4GB + 64GB variant Rs 12,999 and 6GB + 64GB variant Rs 14,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X