ಶೀಘ್ರದಲ್ಲೇ ಬರಲಿದೆ ರಿಯಲ್‌ಮಿ 6i ಸ್ಮಾರ್ಟ್‌ಫೋನ್‌!

|

ರಿಯಲ್‌ಮಿ ಕಂಪೆನಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ರಿಯಲ್‌ಮಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಸದಾ ಹೊಸತನದ ಫೀಚರ್ಸ್‌ಗಳನ್ನ ಪರಿಚಯಿಸುತ್ತಾ ಮಾರುಕಟ್ಟೆಯಲ್ಲಿ ಏರುಗತಿಯ ಬೆಳವಣಿಗೆ ಸಾಧಿಸುತ್ತಿರುವ ರಿಯಲ್‌ಮಿ ಇದೀಗ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಹೊಸ ರಿಯಲ್‌ಮಿ 6i ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ 17, ರಂದು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G80 SOC ಪ್ರೊಸೆಸರ್‌ ವೇಗವನ್ನ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿರಲಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿರಲಿದ್ದು, ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗ್ತಿದೆ. ಹಾಗೇ ನೋಡಿದರೆ ಈ ಹಿಂದಿನ ರಿಯಲ್‌ಮಿ 5i ಸ್ಮಾರ್ಟ್‌ಫೋನ್‌ನಲ್ಲಿ 8ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿತ್ತು. ಇದಕ್ಕೆ ಹೋಲಿಸಲಿದರೆ ರಿಯಲ್‌ಮಿ 6i ಬಹಳಷ್ಟು ಅಪ್ಡೇಟ್‌ ಆಗಿರಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿರಲಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಹೊಂದಿದ್ದು

ಅಲ್ಲದೆ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಅಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟೆಕ್‌ ಮಾರುಕಟ್ಟೆಯಲ್ಲಿ ಈ ಮಾದರಿಯ ಪ್ರೊಸೆಸರ್‌ ಹೊಂದಿರುವ ಮೊದಲ ಸ್ಮಾರ್ಟ್‌ಫೋನ್ ಇದಾಗಿರಲಿದೆ. ಇದಲ್ಲದೆ, ಈ ಸ್ಮಾರ್ಟ್‌ಫೋನ್‌ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿರಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ನಾಚ್ ವಿನ್ಯಾಸದ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ.

ನೋಡಿದ

ಹಾಗೇ ನೋಡಿದ್ರೆ ರಿಯಲ್ಮೆ 6 ಮತ್ತು 6 ಪ್ರೊನಲ್ಲಿ ನೋಡಿದ ಪಂಚ್-ಹೋಲ್ ವಿನ್ಯಾಸ ಈ ಸ್ಮಾರ್ಟ್‌ಫೋನ್‌ನಲ್ಲಿ ಕಂಡುಬರುವುದಿಲ್ಲ ಎನ್ನಲಾಗ್ತಿದೆ. ಅಲ್ಲದೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿರುವುದು ಅನುಮಾನ ಎಂದು ಹೇಳಲಾಗ್ತಿದೆ. ಇದು ಸ್ಮಾರ್ಟ್‌ಫೋನ್‌ನ ರಿಯರ್‌ ಸೆಟ್‌ಅಪ್‌ನಲ್ಲಿ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಬಜೆಟ್‌

ಇನ್ನು ರಿಯಲ್‌ಮಿ 6i ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿಕೊಡುವ ಮಾತು ಕೇಳಿ ಬರುತ್ತಿದೆ. ಸದ್ಯ ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ಗೆ 10,000 ರೂ.ಗಳ ಅಸುಪಾಸಿನ ಬೆಲೆ ನಿಗದಿಪಡಿಸುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ.

Best Mobiles in India

English summary
Realme 6i will be the first smartphone in the market to feature Helio G80 SoC. In addition, the device will also feature Android 10-based OS. Let's take a closer look at the new leaks.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X