ರಿಯಲ್‌ಮಿ ಕಂಪೆನಿಯ ರಿಯಲ್‌ಮಿ 6i ಸ್ಮಾರ್ಟ್‌ಫೋನ್ ಬಿಡುಗಡೆ!
ಟೆಕ್ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಹಲವಾರು ಸ್ಮಾರ್ಟ್‌ಫೋನ್ ಕಂಪೆನಿಗಳು ಪರಿಚಯಿಸಿವೆ. ಇವುಗಳಲ್ಲಿ ರಿಯಲ್‌ಮಿ ಕೂಡ ಒಂದಾಗಿದೆ. ಇನ್ನು ಚೀನಾ ಮೂಲದ ರಿಯಲ್‌ಮಿ ಕಂಪೆನಿ ಈಗಾಗಲೆ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಜನಪ್ರಿಯತೆ ಗಳಿಸಿದೆ. ಸದಾ ಹೊಸತನದ ಫೀಚರ್ಸ್‌ಗಳನ್ನ ಪರಿಚಯಿಸುವ ರಿಯಲ್‌ಮಿ ಕಂಪೆನಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಸಹ ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ರಿಯಲ್‌ಮಿ ತನ್ನ ರಿಯಲ್‌ಮಿ 6i ಸ್ಮಾರ್ಟ್‌ಫೋನ್ ಅನ್ನು ಮ್ಯಾನ್ಮಾರ್‌ನಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೊ G80 ಚಿಪ್‌ಸೆಟ್ ಪ್ರೊಸೆಸರ್ ಹೊಂದಿರುವ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಉತ್ತಮ ಕ್ಯಾಮೆರಾ ಫೀಚರ್ಸ್ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 6.5-ಇಂಚಿನ ಎಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಮಿನಿ ಡ್ರಾಪ್ ನಾಚ್ ಶೈಲಿಯನ್ನ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಉತ್ತಮ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ. ಅಲ್ಲದೆ ಈ ಡಿಸ್‌ಪ್ಲೇಯ ಪಿಕ್ಸೆಲ್ ರೆಸಲ್ಯೂಶನ್ ಸಾಂದ್ರತೆ ಉತ್ತಮವಾಗಿದ್ದು ಗೇಮಿಂಗ್ ಗಾಗಿ ಹೈಪರ್ ಎಂಜಿನ್ ಗೇಮ್ ಟೆಕ್ನಾಲಜಿಯನ್ನ ಅಳವಡಿಸಲಾಗಿದೆ. ಇದರಿಂದ ಗೇಮಿಂಗ್‌ನಲ್ಲಿ ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 12 nm ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು 4GB RAM ಮತ್ತು 64GB ಮತ್ತು 128GB ವೇರಿಯೆಂಟ್ ಆಯ್ಕೆಯ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 256 GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್‌ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ ಪೋರ್ಟ್ರೇಟ್ ಲೆನ್ಸ್, ಮ್ಯಾಕ್ರೋ ಲೆನ್ಸ್ ಮತ್ತು ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿರುವ ಕ್ಯಾಮೆರಾಗಳನ್ನ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ನೈಟ್ ಮೋಡ್ ಮತ್ತು ಎಐ ಬ್ಯೂಟಿ ಫೀಚರ್ಸ್ ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯಲ್ಮೆ 6i ಸ್ಮಾರ್ಟ್‌ಫೋನ್ ರಿವರ್ಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ರಿಯಲ್‌ಮೆ 6i 3GB RAM ಮತ್ತು 64GB ಸಂಗ್ರಹ ಸಾಮರ್ಥ್ಯದ ಬೇಸ್ ಮಾಡೆಲ್ KS 249,900 (ಅಂದಾಜು 13,000 ರೂ,) ಬೆಲೆಯನ್ನ ಹೊಂದಿದೆ. ಇದಲ್ಲದೆ ರಿಯಲ್‌ಮೆ 6i 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ KS 299,900 (ಅಂದಾಜು 15,800 ರೂ.)ಬೆಲೆಯನ್ನ ಹೊಂದಿದ್ದು,ಇದೇ ಮಾರ್ಚ್ 29 ರಿಂದ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ‘ವೈಟ್ ಮಿಲ್ಕ್' ಮತ್ತು ‘ಗ್ರೀನ್ ಟೀ' ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications




