ಬಜೆಟ್ ಬೆಲೆಯಲ್ಲಿ ರಿಯಲ್ ಮಿ 6i ಸ್ಮಾರ್ಟ್‌ಫೋನ್ ಬಿಡುಗಡೆ!
ರಿಯಲ್ ಮಿ ಕಂಪನಿಯು ಕಡಿಮೆ ಅವಧಿಯಲ್ಲಿ ಹಲವು ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಲಿಸ್ಟಿಗೆ ಈಗ ಮತ್ತೊಂದು ಸ್ಮಾರ್ಟ್‌ಫೋನ್ ಸೇರ್ಪಡೆ ಆಗಿದೆ. ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ 6i ಸ್ಮಾರ್ಟ್‌ಫೋನ್ ಭಾರತದಲ್ಲಿ ಇಂದು (ಜುಲೈ 24) ಬಿಡುಗಡೆ ಆಗಿದೆ. ನಿರೀಕ್ಷೆಯಂತೆ ಬಜೆಟ್ ದರವನ್ನು ಈ ಫೋನ್ ಹೊಂದಿರುವುದು ಪ್ರಮುಖ ಆಕರ್ಷಣೆ ಆಗಿದೆ.

ಹೌದು, ರಿಯಲ್ ಮಿ ಕಂಪನಿಯು ತನ್ನ ಹೊಸ ರಿಯಲ್ ಮಿ 6i ಸ್ಮಾರ್ಟ್‌ಫೋನ್ ಅನ್ನು ಇಂದು ಆನ್‌ಲೈನ್ ಕಾರ್ಯಕ್ರಮದ ಮೂಲಕ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಪಡೆದಿದ್ದು, ಮೀಡಿಯಾ ಟೆಕ್ ಹಿಲಿಯೊ G90 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದರ ಆರಂಭಿಕ ಬೆಲೆಯು 12,999ರೂ ಆಗಿದ್ದು, ಬ್ಲ್ಯಾಕ್ ಮತ್ತು ವೈಟ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನು ರಿಯಲ್ ಮಿ 6i ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರಿಯಲ್ ಮಿ 6i ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು LCD ಮಾದರಿಯಲ್ಲಿ ಇದ್ದು, ಪಂಚ್‌ಹೋಲ್ ವಿನ್ಯಾಸ ಪಡೆದಿದೆ. ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅನುಪಾತ 90.5% ಆಗಿದ್ದು, 90Hz ಸಾಮರ್ಥ್ಯ ಪಡೆದಿದೆ. ಗೊರಿಲ್ಲಾ ಗ್ಲಾಸ್ ಸಪೋರ್ಟ್ ಇದೆ.

ಪ್ರೊಸೆಸರ್ ಕಾರ್ಯ
ರಿಯಲ್ ಮಿ 6i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G90 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 10 ಓಎಸ್ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯ ಮತ್ತು 64GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ.

ಕ್ಯಾಮೆರಾ ವಿಶೇಷ
ರಿಯಲ್ ಮಿ 6i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿರಲಿದ್ದು, ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ನಲ್ಲಿರಲಿವೆ. ಹಾಗೆಯೇ 16ಎಂಪಿಯ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಪವರ್
ರಿಯಲ್ ಮಿ 6i ಸ್ಮಾರ್ಟ್‌ಫೋನ್ 4300mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 30W ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.


Click it and Unblock the Notifications








