ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ ಬಿಡುಗಡೆ; ಬೆಲೆ ಎಷ್ಟು?
ಇತ್ತೀಚಿಗಷ್ಟೆ ರಿಯಲ್‌ಮಿ ಮೊಬೈಲ್ ಕಂಪನಿಯು ರಿಯಲ್ ಮಿ 7 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯ ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಮೆಚ್ಚಿಸಿದೆ. ರಿಯಲ್‌ಮಿ ಕಂಪನಿಯು ಅದರ ಮುಂದುವರಿದ ಭಾಗವಾಗಿ ಈಗ ರಿಯಲ್‌ಮಿ 7 ಸರಣಿಯಲ್ಲಿ ಹೊಸದಾಗಿ ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ.

ಹೌದು, ರಿಯಲ್‌ಮಿ ಕಂಪನಿಯು ನೂತನವಾಗಿ ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ಜೊತೆಗೆ ಆಂಡ್ರಾಯ್ಡ್ 10 ಓಎಸ್ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ನೊಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6.5 ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.5 ಆಗಿದೆ.

ಪ್ರೊಸೆಸರ್ ಯಾವುದು
ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 6GB + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಆಂಡ್ರಾಯ್ಡ್ 10 ಓಎಸ್ ಬೆಂಬಲ ಸಹ ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ.

ಕ್ಯಾಮೆರಾ ಸೆನ್ಸಾರ್
ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.

ಬ್ಯಾಟರಿ ಪವರ್
ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಪಡೆದಿದ್ದು, 30W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು?
ರಿಯಲ್‌ಮಿ 7 5G ಸ್ಮಾರ್ಟ್‌ಫೋನ್ 6GB + 128GB ವೇರಿಯಂಟ್ ಬೆಲೆಯು ಯುಕೆದಲ್ಲಿ GBP 279 (ಅಂದಾಜು 27,400ರೂ.) ಇನ್ನು ಈ ಸ್ಮಾರ್ಟ್‌ಫೋನ್ ಬಾಲ್ಟಿಕ್ ಬ್ಲೂ ಕಲರ್ ಆಯ್ಕೆ ಹೊಂದಿದೆ. ಭಾರತರದಲ್ಲಿ ಯಾವಾಗ ಎಂಟ್ರಿ ಎನ್ನುವ ಬಗ್ಗೆ ಮಾಹಿತಿ ಹೊರಹಾಕಿಲ್ಲ.


Click it and Unblock the Notifications





