ಇಂದು ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!.ಬೆಲೆ ಎಷ್ಟು ಗೊತ್ತಾ?
ರಿಯಲ್‌ಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನಿನ ಫಸ್ಟ್ ಸೇಲ್ ಇಂದು ಭಾರತದಲ್ಲಿ ನಡೆಯಲಿದೆ. ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 12ರಂದು ಮಾರಾಟ ಪ್ರಾರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 19,999ರೂ. ಆಗಿದೆ.

ಹೌದು, ರಿಯಲ್‌ಮಿ ಕಂಪೆನಿಯ ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ ಇಂದು (ಸೆ.14) ಮೊದಲ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ 6GB RAM+128GB ಸ್ಟೋರೇಜ್ ಹಾಗೂ 8GB RAM ಆಂತರಿಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 720G SoC ಪ್ರೊಸೆಸರ್ ಅನ್ನು ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಆಗಿದೆ. ಇನ್ನು ರಿಯಲ್‌ಮಿ 7 ಪ್ರೊ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6.4-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.8 ಆಗಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ.

ಪ್ರೊಸೆಸರ್ ವೇಗ ಹೇಗೆ
ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 720G SoC ಪ್ರೊಸೆಸರ್ ಅನ್ನು ಹೊಂದಿದ್ದು, ಜೊತೆಗೆ 6GB RAM+128GB ಸ್ಟೋರೇಜ್ ಹಾಗೂ 8GB RAM ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ. ಸ್ಟಿರಿಯೋ ಸ್ಪೀಕರ್ಸ್ ಸೌಲಭ್ಯವನ್ನು ಪಡೆದಿದೆ.

ಕ್ವಾಡ್ ಕ್ಯಾಮೆರಾ ಸೆಟ್‌ಅಪ್
ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.

ಬ್ಯಾಟರಿ ಶಕ್ತಿ
ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ 4500mAh ಬ್ಯಾಟರಿಯನ್ನು ಪಡೆದಿದ್ದು, 65W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.

ಬೆಲೆ ಎಷ್ಟು?
ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ಬೆಲೆಯು 19,999ರೂ. ಆಗಿದ್ದು, 8GB + 128GB ವೇರಿಯಂಟ್ ದರವು 21,999ರೂ. ಆಗಿದೆ. ಇನ್ನು ರಿಯಲ್ ಮಿ 7 ಪ್ರೊ ಫೋನ್ ಇಂದು (ಸೆ.14) ಫ್ಲಿಪ್‌ಕಾರ್ಟ್‌ನಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ.


Click it and Unblock the Notifications








