ಫ್ಲಿಪ್‌ಕಾರ್ಟ್‌ನಲ್ಲಿ ಇಂದು Realme 7 ಸ್ಮಾರ್ಟ್‌ಫೋನ್ ಸೇಲ್!
ರಿಯಲ್‌ಮಿ ಕಂಪನಿಯ ಹೊಸ ರಿಯಲ್ ಮಿ 7 ಸ್ಮಾರ್ಟ್‌ಫೋನ್ ಈಗಾಗಲೇ ಆನ್‌ಲೈನ್ ತಾಣದಲ್ಲಿ ಮಾರಾಟ ಕಂಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ.17) ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 12ರಂದು ಮತ್ತೆ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 14,999ರೂ.ರೂ. ಆಗಿದೆ.

ಹೌದು, ರಿಯಲ್‌ಮಿ ಕಂಪೆನಿಯ ರಿಯಲ್ ಮಿ 7 ಸ್ಮಾರ್ಟ್‌ಫೋನ್ ಇಂದು ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್ 6GB + 64GB ಮತ್ತು 8GB + 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಅನ್ನು ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಆಗಿದೆ. ಇನ್ನು ರಿಯಲ್ ಮಿ 7 ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರಿಯಲ್ ಮಿ 7 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6.5 ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.8 ಆಗಿದೆ.

ಪ್ರೊಸೆಸರ್ ಕಾರ್ಯ
ರಿಯಲ್ ಮಿ 7 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 6GB/64GB ಹಾಗೂ 8GB + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಆಂಡ್ರಾಯ್ಡ್ 10 ಓಎಸ್ ಬೆಂಬಲ ಸಹ ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ.

ಕ್ಯಾಮೆರಾ ವಿಶೇಷ
ರಿಯಲ್ ಮಿ 7 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.

ಬ್ಯಾಟರಿ ಪವರ್
ರಿಯಲ್ ಮಿ 7 ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಪಡೆದಿದ್ದು, 30W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ?
ರಿಯಲ್ ಮಿ 7 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದೆ. ಬೇಸ್ ವೇರಿಯಂಟ್ 6GB + 64GB ವೇರಿಯಂಟ್ ಬೆಲೆಯು 14,999ರೂ. ರೂ. ಆಗಿದೆ. ಮತ್ತು 8GB + 128GB ವೇರಿಯಂಟ್ ಬೆಲೆಯು 16,999ರೂ.ಆಗಿದೆ.


Click it and Unblock the Notifications








