Home
ಸುದ್ದಿಜಾಲ

ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌!

ಜನಪ್ರಿಯ ರಿಯಲ್‌ಮಿ ಕಂಪನಿಯು ಸದ್ಯ ಹೊಸದಾಗಿ ರಿಯಲ್‌ಮಿ 7 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿ ಸುದ್ದಿಯಲ್ಲಿದೆ. ಈ ಸರಣಿಯು ರಿಯಲ್‌ಮಿ 7 ಮತ್ತು ರಿಯಲ್‌ಮಿ 7 ಪ್ರೊ ಮಾಡೆಲ್‌ಗಳನ್ನು ಒಳಗೊಂಡಿದೆ. ಇದೀಗ ಅದರ ಬೆನ್ನಲೇ ರಿಯಲ್‌ಮಿ ಸಂಸ್ಥೆಯು ಈ ಸರಣಿಯಲ್ಲಿ ಮತ್ತೆ ಹೊಸದೊಂದು ಸ್ಮಾರ್ಟ್‌ಫೋನ್ ಪರಿಚಯಿಸಲು ಸಜ್ಜಾಗಿದೆ. ಅದುವೇ ರಿಯಲ್‌ಮಿ 7i ಸ್ಮಾರ್ಟ್‌ಫೋನ್.

 ರಿಯಲ್‌ಮಿ 7i

ಹೌದು, ರಿಯಲ್‌ಮಿ ಕಂಪನಿಯು ನೂತನವಾಗಿ ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 17ರಂದು ಇಂಡೋನೇಶಿಯಾದಲ್ಲಿ ಲಾಂಚ್ ಮಾಡುವುದು ಬಹುತೇಕ ಖಚಿತವಾಗಿದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಲೀಕ್ ಮಾಹಿತಿಯಂತೆ ಈ ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ 7i ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಮಾದರಿಯನ್ನು ಹೊಂದಿರಲಿದೆ. ಹಾಗೆಯೇ ಡಿಸ್‌ಪ್ಲೇಯ ಸ್ಕ್ರೀನ್ ರೀಫ್ರೇಶ್ ರೇಟ್ 90Hz ಆಗಿರಲಿದೆ. ಇದರೊಂದಿಗೆ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿರಲಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಇರಲಿದೆ. ಈ ಫೋನ್ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ.

ಕ್ಯಾಮೆರಾ ಸ್ಪೆಷಲ್

ಕ್ಯಾಮೆರಾ ಸ್ಪೆಷಲ್

ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿರುವ ಸಾಧ್ಯತೆಗಳಿವೆ. ಈ ಫೋನಿನ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿರಲಿದೆ ಉಳಿದಂತೆ ಎರಡು ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನಲ್ಲಿರಲಿವೆ. ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ.

ಬ್ಯಾಟರಿ ಸಾಮರ್ಥ್ಯ

ಬ್ಯಾಟರಿ ಸಾಮರ್ಥ್ಯ

ರಿಯಲ್‌ಮಿ 7i ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿರಲಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೌಲಭ್ಯವು ಇರಲಿದೆ.

Best Mobiles in India

English summary
Realme confirmed that the Realme 7i will debut alongside the vanilla Realme 7 on 17th September.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+