ಭಾರತದಲ್ಲಿ ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಬಿಡುಗಡೆ!.ಬೆಲೆ ಎಷ್ಟು?.ಫೀಚರ್ಸ್ ಏನು?
ಇತ್ತೀಚಿಗಷ್ಟೆ ರಿಯಲ್‌ಮಿ 7 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿರುವ ರಿಯಲ್‌ಮಿ ಕಂಪನಿಯು ಅದರ ಮುಂದುವರಿದ ಭಾಗವಾಗಿ ಈಗ ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್ ಅನ್ನು ಹೊಂದಿದ್ದು, ಮಾರುಕಟ್ಟೆಯಲ್ಲಿನ ಬಜೆಟ್ ಫೋನ್‌ಗಳಿಗೆ ಪೈಪೋಟಿ ನೀಡುವ ಲಕ್ಷಣಗಳನ್ನು ಹೊರಹಾಕಿದೆ. ಇನ್ನು ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿದೆ.

ಹೌದು, ರಿಯಲ್‌ಮಿ ಕಂಪನಿಯು ನೂತನವಾಗಿ ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ಜೊತೆಗೆ ಆಂಡ್ರಾಯ್ಡ್ 10 ಓಎಸ್ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ನೊಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಸ್ಕ್ರೀನ್ ರೀಫ್ರೇಶ್ ರೇಟ್ 90Hz ಆಗಿದೆ. ಇದರೊಂದಿಗೆ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ.

ಪ್ರೊಸೆಸರ್ ಯಾವುದು
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ.

ಕ್ವಾಡ್ ಕ್ಯಾಮೆರಾ ಸ್ಪೆಷಲ್
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದ್ದು, ಉಳಿದಂತೆ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನಲ್ಲಿ ಇವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.

ಬ್ಯಾಟರಿ ಸಾಮರ್ಥ್ಯ
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಮೈಕ್ರೋ-USB ಪೋರ್ಟ್, ಬ್ಲೂಟೂತ್ v5.0 ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು?
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 4GB + 64GB ವೇರಿಯಂಟ್ ಬೆಲೆಯು 11,999 ರೂ. ಆಗಿದೆ. 4GB + 128GB ವೇರಿಯಂಟ್ ಬೆಲೆಯು 12,999ರೂ. ಆಗಿದೆ. ಇದೇ ಅಕ್ಟೋಬರ್ 16ರಂದು ಫಸ್ಟ್ ಸೇಲ್ ಶುರುವಾಗಲಿದ್ದು, ಫ್ಯೂಜನ್ ಗ್ರೀನ್, ಫ್ಯೂಜನ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications




