Home
ಸುದ್ದಿಜಾಲ

ಭಾರತದಲ್ಲಿ ಇಂದು ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!

ರಿಯಲ್‌ಮಿ ಕಂಪೆನಿ ಕೆಲ ದಿನಗಳ ಹಿಂದೆ ಭಾರತದಲ್ಲಿ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಇಂದು (ಏ.28) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌, ರಿಯಲ್‌ಮಿ.ಕಾಮ್‌ ಮತ್ತು ಆಫ್‌ಲೈನ್‌ ರಿಟೆಲ್‌ ಸ್ಟೋರ್‌ಗಳಲ್ಲಿ ಈ ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ನಡೆಯಲಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 14,999 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಮತ್ತು ಡೈನಾಮಿಕ್ RAM ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದ್ದು, ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಒಳಗೊಂಡಿರುವ ಫೀಚರ್ಸ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 1,080 × 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ಸ್ಕ್ರೀನ್ ರಿಫ್ರೆಶ್ ರೇಟ್‌, 90.5% ಸ್ಕ್ರೀನ್-ಟು-ಬಾಡಿ ಅನುಪಾತ, 405 ಪಿಪಿ ಪಿಕ್ಸೆಲ್ ಸಾಂದ್ರತೆ ಮತ್ತು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ

ಕ್ಯಾಮೆರಾ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ f/ 2.4 ಮ್ಯಾಕ್ರೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ರಿಯರ್‌ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ಬ್ಯೂಟಿ ಫಿಲ್ಟರ್‌ಗಳ ಹೊರತಾಗಿ ಲೋ-ಲೈಟ್‌ ಫೋಟೋಗ್ರಫಿಗಾಗಿ ಸೂಪರ್ ನೈಟ್‌ಸ್ಕೇಪ್ ಮೋಡ್‌ ಅನ್ನು ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದು ಸೂಪರ್ ನೈಟ್ಸ್ಕೇಪ್ ಮೋಡ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 5G ಬೆಂಬಲವನ್ನು ಹೊರತುಪಡಿಸಿ 4G ಎಲ್ ಟಿಇ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಬೆಲೆ 4GB RAM + 128GB ಇಂಟರ್‌ ಸ್ಟೋರೇಜ್‌ ರೂಪಾಂತರಕ್ಕೆ 14,999 ರೂ. ಮತ್ತು 8 GB RAM + 128GB ಇಂಟರ್‌ ಸ್ಟೋರೇಜ್ ಆಯ್ಕೆಯ ಬೆಲೆ 16,999 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೂಪರ್‌ಸಾನಿಕ್ ಬ್ಲ್ಯಾಕ್‌ ಮತ್ತು ಸೂಪರ್‌ಸಾನಿಕ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Realme 8 5G Goes on first sale today via realme.com, flipkart:price,offers.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+