ರಿಯಲ್‌ಮಿ 8 5G ಫೋನಿನ ಅಗ್ಗದ ಬೆಲೆಯ ಆವೃತ್ತಿ ಈಗ ಭಾರತದಲ್ಲಿ ಲಭ್ಯ!

|

ಪ್ರಸ್ತುತ 5G ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಪ್ರತಿಷ್ಠಿತ ಮೊಬೈಲ್ ಕಂಪನಿಗಳು 5G ಆವೃತ್ತಿಯ ಫೋನ್‌ಗಳನ್ನು ಲಾಂಚ್ ಮಾಡುತ್ತ ಸಾಗಿವೆ. ಅವುಗಳ ಪೈಕಿ ರಿಯಲ್‌ಮಿ ಸಂಸ್ಥೆಯು ಸಹ ಕೆಲವು 5G ಮಾಡೆಲ್‌ ಫೋನ್‌ಗಳನ್ನು ಅನಾವರಣ ಮಾಡಿ ಸೈ ಎನಿಸಿಕೊಂಡಿದೆ. ಅವುಗಳಲ್ಲಿ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಇದೀಗ ಕಂಪನಿಯು ರಿಯಲ್‌ಮಿ 8 5G ಫೋನಿನ ಅಗ್ಗದ ಆವೃತ್ತಿಯನ್ನು ಬಿಡುಗಡೆ ಮಾಡಿ ಗ್ರಾಹಕರನ್ನು ಆಕರ್ಷಿಸಿದೆ.

ಸ್ಮಾರ್ಟ್‌ಫೋನ್‌

ಹೌದು, ರಿಯಲ್‌ಮಿ ಕಂಪನಿಯು ಹೊಸದಾಗಿ ರಿಯಲ್‌ಮಿ 8 5G ಫೋನಿನ 4GB RAM ಮತ್ತು 64GB ಆವೃತ್ತಿಯನ್ನು ಲಾಂಚ್ ಮಾಡಿದೆ. ಇದೊಂದು ಕಡಿಮೆ ಬೆಲೆಗೆ ಲಭ್ಯವಿರುವ 5G ಸ್ಮಾರ್ಟ್‌ಫೋನ್‌ ಆಗಿ ಗುರುತಿಸಿಕೊಂಡಿದೆ. ಇನ್ನು ಹೊಸದಾಗಿ ಬಿಡುಗಡೆ ಆಗಿರುವ 4GB RAM ಮತ್ತು 64GB ಆವೃತ್ತಿ ಬೆಲೆಯು 13,999ರೂ. ಆಗಿದೆ. ಇನ್ನು ಈ ಫೋನ್ ಇದೇ ಮೇ 18 ರಂದು ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್‌ಮಿ ವೆಬ್‌ಸೈಟ್‌ ಮೂಲಕ ಮೊದಲ ಮಾರಾಟ ಶುರು ಮಾಡಲಿದೆ. ಹಾಗಾದರೇ ರಿಯಲ್‌ಮಿ 8 5G ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 1,080 × 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ಸ್ಕ್ರೀನ್ ರಿಫ್ರೆಶ್ ರೇಟ್‌, 90.5% ಸ್ಕ್ರೀನ್-ಟು-ಬಾಡಿ ಅನುಪಾತ, 405 ಪಿಪಿ ಪಿಕ್ಸೆಲ್ ಸಾಂದ್ರತೆ ಮತ್ತು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ f/ 2.4 ಮ್ಯಾಕ್ರೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ರಿಯರ್‌ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ಬ್ಯೂಟಿ ಫಿಲ್ಟರ್‌ಗಳ ಹೊರತಾಗಿ ಲೋ-ಲೈಟ್‌ ಫೋಟೋಗ್ರಫಿಗಾಗಿ ಸೂಪರ್ ನೈಟ್‌ಸ್ಕೇಪ್ ಮೋಡ್‌ ಅನ್ನು ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದು ಸೂಪರ್ ನೈಟ್ಸ್ಕೇಪ್ ಮೋಡ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 5G ಬೆಂಬಲವನ್ನು ಹೊರತುಪಡಿಸಿ 4G ಎಲ್ ಟಿಇ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ವೇರಿಯಂಟ್ ಬೆಲೆಯು 13,999ರೂ.ಆಗಿದೆ. 4GB + 128GB ವೇರಿಯಂಟ್ ದರವು 14,999ರೂ. ಆಗಿದೆ. ಹಾಗೆಯೇ 8GB + 128GB ವೇರಿಯಂಟ್ ಬೆಲೆಯು 16,999ರೂ. ಆಗಿದೆ.

Most Read Articles
Best Mobiles in India

English summary
The phone comes with price tag of Rs 13,999 and is now the cheapest 5G smartphone in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X