ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಫೀಚರ್ಸ್‌ ಏನು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಡೇಟ್‌ ಪಿಕ್ಸ್‌ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಸಂಸ್ಥೆ ತನ್ನ ಹೊಸ ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 21 ರಂದು ಬರಲಿದೆ. ಸದ್ಯ ರಿಯಲ್‌ಮಿ ಕಂಪನಿಯು 8 5G ಸ್ಮಾರ್ಟ್‌ಫೋನ್‌ ವೀಡಿಯೊ ಟೀಸರ್ ಮತ್ತು ಒಂದೆರಡು ಪೋಸ್ಟರ್‌ಗಳನ್ನು ಹೊರತಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.8% ಸ್ಕ್ರೀನ್-ಟು-ಬಾಡಿ ಅನುಪಾತ, 180Hz ಟಚ್-ಸ್ಯಾಂಪ್ಲಿಂಗ್ ರೇಟ್‌ ಮತ್ತು 1000nits ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್ಮೆ ಯುಐ 2.0 ou ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB, 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ರಿಯರ್‌ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 21 ರಂದು ಥೈಲ್ಯಾಂಡ್‌ನಲ್ಲಿ ಬಿಡುಗಡೆ ಆಗಲಿದೆ. ಆದರೆ ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Best Mobiles in India

English summary
Realme 8 5G smartphone India Announcement date likey to go live today.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X