ರಿಯಲ್‌ಮಿ 8 5G ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಸಂಸ್ಥೆ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದ್ದು, ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ಅನ್ನು ಒಳಗೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ "ನೈಟ್‌ಸ್ಕೇಪ್" ಸೆನ್ಸಾರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ರಿಯಲ್‌ಮಿ 8 5G ಸ್ಮಾರ್ಟ್‌ಫೋನ್ 1,080 × 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ಸ್ಕ್ರೀನ್ ರಿಫ್ರೆಶ್ ರೇಟ್, 90.5% ಸ್ಕ್ರೀನ್-ಟು-ಬಾಡಿ ಅನುಪಾತ, 405 ಪಿಪಿ ಪಿಕ್ಸೆಲ್ ಸಾಂದ್ರತೆ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ
ರಿಯಲ್‌ಮಿ 8 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ f/ 2.4 ಮ್ಯಾಕ್ರೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ರಿಯರ್ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ಬ್ಯೂಟಿ ಫಿಲ್ಟರ್‌ಗಳ ಹೊರತಾಗಿ ಲೋ-ಲೈಟ್ ಫೋಟೋಗ್ರಫಿಗಾಗಿ ಸೂಪರ್ ನೈಟ್ಸ್ಕೇಪ್ ಮೋಡ್ ಅನ್ನು ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದು ಸೂಪರ್ ನೈಟ್ಸ್ಕೇಪ್ ಮೋಡ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 5G ಬೆಂಬಲವನ್ನು ಹೊರತುಪಡಿಸಿ 4G ಎಲ್ ಟಿಇ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ 8 5G ಬೆಲೆ 4GB RAM+ 128GB ಶೇಖರಣಾ ರೂಪಾಂತರಕ್ಕೆ 14,999 ರೂ. ಹಾಗೂ 8 GB RAM + 128GB ಸ್ಟೋರೇಜ್ ಆಯ್ಕೆ ಬೆಲೆ 16,999 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೂಪರ್ಸಾನಿಕ್ ಬ್ಲ್ಯಾಕ್ ಮತ್ತು ಸೂಪರ್ಸಾನಿಕ್ ಬ್ಲೂ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಅಲ್ಲದೆ ಈ ಫೋನ್ ಇದೇ ಏಪ್ರಿಲ್ 28, ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಫ್ಲಿಪ್‌ಕಾರ್ಟ್, ರಿಯಲ್‌ಮೆ.ಕಾಮ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಮಾರಾಟವಾಗಲಿದೆ.


Click it and Unblock the Notifications





