ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!

|

ಜನಪ್ರಿಯ ಮೊಬೈಲ್ ಸಂಸ್ಥೆಗಳ ಪೈಕಿ ಒಂದಾದ ರಿಯಲ್‌ಮಿ ಕಂಪನಿಯ ಹಲವು ಫೋನ್‌ಗಳು ಗ್ರಾಹಕರನ್ನು ಸೆಳೆದಿದೆ. ಅವುಗಳಲ್ಲಿ ಇತ್ತೀಚಿನ ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ಸಹ ಆಕರ್ಷಕ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದ ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಆಗಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.

ಸ್ಮಾರ್ಟ್‌ಫೋನ್

ಹೌದು, ರಿಯಲ್‌ಮಿ ಕಂಪನಿಯ ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 500ರೂ. ಕಡಿತವಾಗಿದೆ. ಹೀಗಾಗಿ 4GB + 128GB ವೇರಿಯಂಟ್‌ನ ಫೋನ್‌ ಬೆಲೆಯು 14,999ರೂ.ಗಳಾಗಿದೆ. ಆದರೆ ಇದೀಗ ಬೆಲೆ ಇಳಿಕೆಯಿಂದಾಗಿ ಆರಂಭಿಕ ವೇರಿಯಂಟ್ 14,499ರೂ.ಗಳಲ್ಲಿ ಲಭ್ಯವಾಗಲಿದೆ. ತ್ರಿವಳಿ ಕ್ಯಾಮೆರಾ ರಚನೆ ಹೊಂದಿರುವ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ ಈ ರಿಯಾಯಿತಿ ಸಿಗಲಿದೆ ಎನ್ನಲಾಗಿದೆ. ಹಾಗಾದರೇ ರಿಯಲ್‌ಮಿ 8 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 8- ಡಿಸ್‌ಪ್ಲೇ

ರಿಯಲ್‌ಮಿ 8- ಡಿಸ್‌ಪ್ಲೇ

ರಿಯಲ್‌ಮಿ 8 ಸ್ಮಾರ್ಟ್‌ಫೋನ್ 6.4 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನು ಒಳಗೊಂಡಿದ್ದು, 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ರಿಯಲ್‌ಮಿ 8 ಪ್ರೊಸೆಸರ್

ರಿಯಲ್‌ಮಿ 8 ಪ್ರೊಸೆಸರ್

ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ Adreno 618 GPU ಗ್ರಾಫಿಕ್ ಸಪೋರ್ಟ್‌ನ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಇತ್ತೀಚಿನ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ 4GB + 128GB ಮತ್ತು 8GB + 128GB ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ.

ರಿಯಲ್‌ಮಿ 8 - ಕ್ಯಾಮೆರಾ

ರಿಯಲ್‌ಮಿ 8 - ಕ್ಯಾಮೆರಾ

ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ರಿಯಲ್‌ಮಿ 8 - ಬ್ಯಾಟರಿ

ರಿಯಲ್‌ಮಿ 8 - ಬ್ಯಾಟರಿ

ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರೊಂದಿಗೆ 30W Dart ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿರಲಿದೆ. ಹಾಗೆಯೇ ಈ ಫೋನ್ ಸೈಬರ್ ಸಿಲ್ವರ್ ಹಾಗೂ ಸೈಬರ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ 8 ಫೋನಿನ ಬೆಲೆಯಲ್ಲಿ 500ರೂ. ಇಳಿಕೆ ಮಾಡಲಾಗಿದೆ. ಹೀಗಾಗಿ 14,999ರೂ. ದರ ಹೊಂದಿದ್ದ 4GB + 128GB ವೇರಿಯಂಟ್ ಬೆಲೆಯು ಈಗ 14,499ರೂ. ಆಗಿದೆ. ಹಾಗೆಯೇ 6GB + 128GB ವೇರಿಯಂಟ್ ಬೆಲೆಯು ಈಗ 15,499ರೂ. ಆಗಿದೆ. ಇನ್ನು ಹೈ ಎಂಡ್‌ 8GB + 128GB ವೇರಿಯಂಟ್‌ ದರವು 16,499ರೂ. ಆಗಿದೆ.

Most Read Articles
Best Mobiles in India

English summary
Realme 8 has got a Rs. 500 discount in India on purchases through Flipkart, the company has announced.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X