ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಫೋನ್‌ಗಳ ಲಾಂಚ್‌ಗೆ ಮುಹೂರ್ತ ಫಿಕ್ಸ್‌!

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ರಿಯಲ್‌ಮಿ ಈಗಾಗಲೇ ಹಲವು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇತ್ತೀಚಿಗಷ್ಟೆ ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಸರಣಿ ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಅದರ ಬೆನ್ನಲ್ಲೇ ಇದೀಗ ಅದೇ ಸರಣಿಯಲ್ಲಿ ನೂತನವಾಗಿ ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಸಕಲ ತಯಾರಿ ನಡೆಸಿದೆ.

ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಫೋನ್‌ಗಳ ಲಾಂಚ್‌ಗೆ ಮುಹೂರ್ತ ಫಿಕ್ಸ್‌!

ಹೌದು, ರಿಯಲ್‌ಮಿ ಕಂಪನಿಯು ಇದೇ ಸೆಪ್ಟೆಂಬರ್ 9ರಂದು ಅಧಿಕೃತವಾಗಿ ವರ್ಚುವಲ್ ಕಾರ್ಯಕ್ರಮದ ಮೂಲಕ ಭಾರತೀಯ ಮಾರುಕಟ್ಟೆಗೆ ಹೊಸ ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ಗಳ ಲೀಕ್ ಮಾಹಿತಿಯಂತೆ ಫೀಚರ್ಸ್‌ಗಳು ಸಹ ಆಕರ್ಷಕ ಆಗಿವೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ ದರವು 120Hz ಇರಲಿದೆ ಎನ್ನಲಾಗಿದೆ. ಇನ್ನುಳಿದಂತೆ ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಫೋನ್‌ಗಳ ಲಾಂಚ್‌ಗೆ ಮುಹೂರ್ತ ಫಿಕ್ಸ್‌!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ ರೀಫ್ರೇಶ್ ರೇಟ್ ದರವು 120Hz ಹೊಂದಿರಲಿದ್ದು, 180Hz ಟಚ್-ಸ್ಯಾಂಪ್ಲಿಂಗ್ ರೇಟ್‌ ಇರಲಿದೆ. ಅದೇ ರೀತಿ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.50 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು ಇರಲಿದೆ
ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G96 SoC ಪ್ರೊಸೆಸರ್‌ ಅನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 11 ಆಧಾರಿತ ಓಎಸ್‌ ಸಪೋರ್ಟ್‌ ಇರಲಿದೆ. ಈ ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆಯುವ ಸಾಧ್ಯತೆಗಳವೆ. ಅದೇ ರೀತಿ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 5 ಜಿ SoC ಪ್ರೊಸೆಸರ್‌ ಹೊಂದಿರಲಿದ್ದು, ಆಂಡ್ರಾಯ್ಡ್‌ 11 ಸಪೋರ್ಟ್‌ ಇರಲಿದೆ. ಹಾಗೆಯೇ 8GB RAM ಆಯ್ಕೆಯು ಹೊಂದಿರಲಿದೆ ಎನ್ನಲಾಗಿದೆ.

ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಫೋನ್‌ಗಳ ಲಾಂಚ್‌ಗೆ ಮುಹೂರ್ತ ಫಿಕ್ಸ್‌!

ಕ್ಯಾಮೆರಾ ಸೆನ್ಸಾರ್ ಆಯ್ಕೆ
ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿರಲಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿರಲಿದೆ. ಇನ್ನು ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಇರಲಿದೆ. ಅದೇ ರೀತಿ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸಲ್ ಸೆನ್ಸಾರ್ ಪಡೆದಿರಲಿದ್ದು, ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಕ್ಯಾಮೆರಾ ಇರಲಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಈ ಎರಡು ಸ್ಮಾರ್ಟ್‌ಫೋನ್‌ಗಳು 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿವೆ. ಇದಕ್ಕೆ ಪೂರಕವಾಗಿ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಹೊಂದಿರುವ ಸಾಧ್ಯತೆಗಳು ಸಹ ಇವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ 8 ಫೀಚರ್ಸ್‌
ರಿಯಲ್‌ಮಿ 8 ಸ್ಮಾರ್ಟ್‌ಫೋನ್ 6.4 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನು ಒಳಗೊಂಡಿದ್ದು, 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ. ​ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ Adreno 618 GPU ಗ್ರಾಫಿಕ್ ಸಪೋರ್ಟ್‌ನ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಇತ್ತೀಚಿನ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ 4GB + 128GB ಮತ್ತು 8GB + 128GB ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ.

Best Mobiles in India

English summary
Realme 8i And Realme 8s 5G to Launch On 9 September in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X