ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಖ್ಯಾತಿ ಪಡೆದುಕೊಂಡಿದೆ. ನೂತನ ಶೈಲಿಯ ಫೀಚರ್ಸ್‌ಗಳನ್ನು ಹೊಂದಿರುವುದರಿಂದ ಟೆಕ್ ವಲಯದಲ್ಲಿ ಬಹುಬೇಗನೇ ತನ್ನ ಪ್ರಸಿದ್ಧಿಯನ್ನು ವಿಸ್ತರಿಸುತ್ತಿದೆ. ಇನ್ನು ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹಲವು ರೀತಿಯ ಸ್ಮಾರ್ಟ್‌ಫೋನ್ ಪರಿಚಯಿಸಿರುವ ರಿಯಲ್‌ಮಿ ಇದೀಗ ಹೊಸ ರಿಯಲ್‌ಮಿ 8s ಮತ್ತು ರಿಯಲ್‌ಮಿ 8i ಅನ್ನು ಲಾಂಚ್ ಮಾಡಿದೆ. ಜೊತೆಗೆ ತನ್ನ ಮೊದಲ ಟ್ಯಾಬ್ಲೆಟ್ ಅನ್ನು ಸಹ ಅನಾವರಣಗೊಳಿಸಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸದಾಗಿ ಎರಡು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳನ್ನು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನ ಪಡೆದುಕೊಂಡಿವೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಆದರೆ ರಿಯಲ್‌ಮಿ 8s ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G96 ಪ್ರೊಸೆಸರ್ ಹೊಂದಿದ್ದರೆ, ರಿಯಲ್‌ಮಿ 8s ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಹೊಂದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 8i
ರಿಯಲ್‌ಮಿ 8i ಸ್ಮಾರ್ಟ್‌ಫೋನ್ 6.6-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G96 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಅಲ್ಲದೆ 5GB RAM ವರೆಗೆ ವಿಸ್ತರಿಸುಬಹುದಾದ ವರ್ಚುವಲ್ RAM ಆಯ್ಕೆಯನ್ನು ಸಹ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2MP ಸೆನ್ಸಾರ್ ಹೊಂದಿದೆ. ಇದು 16MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ 8s 5G
ರಿಯಲ್‌ಮಿ 8s ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದು 5GB ವರ್ಚುವಲ್ RAM ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP, ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು 16MP ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 8i ಸ್ಮಾರ್ಟ್‌ಫೋನ್ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 13,999 ರೂ.ಹೊಂದಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ಮಾದರಿ ಆಯ್ಕೆಯ ಬೆಲೆ 15,999.ರೂ ಹೊಂದಿದೆ. ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 14 ರಿಂದ ಮಾರಾಟವಾಗಲಿದೆ.
ಇನ್ನು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಬೆಲೆ 6GB RAM + 128GB ಮಾದರಿ ಆಯ್ಕೆಗೆ 17,999ರೂ, ನಿಗದಿಪಡಿಸಲಾಗಿದೆ. ಇನ್ನು 8GB RAM + 128GB ಸ್ಟೋರೇಜ್ ಮಾದರಿಯ ಬೆಲೆ 19,999ರೂ ಆಗಿದೆ. ಈ ಸ್ಮಾರ್ಟ್‌ಫೋನ್‌ನ ಫಸ್ಟ್ ಸೇಲ್ ಇದೇ ಸೆಪ್ಟೆಂಬರ್ 13 ರಂದು ನಡೆಯಲಿದೆ.


Click it and Unblock the Notifications








