ಇಂದು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಫಸ್ಟ್ ಸೇಲ್! ಆಫರ್ ಏನು?
ರಿಯಲ್‌ಮಿ ಮೊಬೈಲ್ ಕಂಪೆನಿ ಕೆಲ ದಿನಗಳ ಹಿಂದೆ ಲಾಂಚ್ ಮಾಡಿದ್ದ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಕಳೆದ ವಾರ ಭಾರತಕ್ಕೆ ಎಂಟ್ರಿ ಕೊಟ್ಟಿದ ಈ ಫೋನ್ ಇಂದು(ಸೆ.13) ಮಧ್ಯಾಹ್ನ 12 ಗಂಟೆಗೆ ತನ್ನ ಫಸ್ಟ್ ಸೇಲ್ ಆರಂಭಿಸಲಿದೆ. ತನ್ನ ಅಧಿಕೃತ ವೆಬ್‌ಸೈಟ್ ರಿಯಲ್‌ಮಿ.ಕಾಮ್ ಮತ್ತು ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊದಲ ಸೇಲ್ ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 17,999ರೂ,ಆಗಿದೆ.

ಹೌದು, ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಇಂದು ಭಾರತದಲ್ಲಿ ತನ್ನ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರುವುದು ಈ ಸ್ಮಾರ್ಟ್‌ಫೋನ್‌ನ ಹೈಲೈಟ್ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್ v5.1 ಮತ್ತು USB Type-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ರೂಪಾಂತರಕ್ಕೆ 17,999ರೂ ಮತ್ತು 8GB + 128GB ಮಾದರಿಯ ಆಯ್ಕೆಗೆ 19,999ರೂ, ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯೂನಿವರ್ಸ್ ಬ್ಲೂ ಮತ್ತು ಯೂನಿವರ್ಸ್ ಪರ್ಪಲ್ ಶೇಡ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್, ಡೆಬಿಟ್ ಕಾರ್ಡ್‌ಗಳು ಅಥವಾ ಈಸಿ ಇಎಂಐ ವಹಿವಾಟು ಅಥವಾ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಅಥವಾ ಕ್ರೆಡಿಟ್ ಇಎಂಐ ವಹಿವಾಟುಗಳನ್ನು ಬಳಸಿಕೊಂಡು ಖರೀದಿಸಿದರೆ 1,500.ರೂ ಗಳ ರಿಯಾಯಿತಿ ದೊರೆಯಲಿದೆ.


Click it and Unblock the Notifications








