ಇಂದು ರಿಯಲ್‌ಮಿ 9 4G ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌!..ಕೊಡುಗೆ ಎಷ್ಟು?

|

ರಿಯಲ್‌ಮಿ ಕಂಪೆನಿಯು ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇಂದು ( ಏ. 12 ) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿ.ಕಾಮ್‌ ತಾಣಗಳ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ.

ಇಂದು ರಿಯಲ್‌ಮಿ 9 4G ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌!..ಕೊಡುಗೆ ಎಷ್ಟು?

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ 9 4G ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಸ್ಕ್ರೀನ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಪವರ್ ಯಾವುದು?
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GBRAM + 128GB , 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಇಂದು ರಿಯಲ್‌ಮಿ 9 4G ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌!..ಕೊಡುಗೆ ಎಷ್ಟು?

ಕ್ಯಾಮೆರಾ ಸೆನ್ಸಾರ್ ವಿಶೇಷ
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದು ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB + 128GB ಸ್ಟೋರೇಜ್ ಮಾದರಿಗೆ 17,999 ರೂ. ಮತ್ತು 12GB + 256GB ಸ್ಟೋರೇಜ್ ಆಯ್ಕೆಗೆ 18,999 ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ವೈಟ್, ಗೋಲ್ಡ್‌ ಮತ್ತು ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಫೋನ್ (ಇಂದು) ಏಪ್ರಿಲ್ 12 ರಂದು ಮಧ್ಯಾಹ್ನ 12 ಗಂಟೆ ರಿಯಲ್‌ಮಿ.ಕಾಮ್‌, ಫ್ಲಿಪ್‌ಕಾರ್ಟ್‌ ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟವಾಗಲಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆಗಳು 2,000 ರೂ. HDFC ಬ್ಯಾಂಕ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳ ಮೇಲೆ ತ್ವರಿತ ರಿಯಾಯಿತಿ ಸಿಗಲಿದೆ.

Best Mobiles in India

English summary
Realme 9 4G First Sale Today Via Flipkart: Price and Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X