ಭಾರತದಲ್ಲಿ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ತಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 7 ಕ್ಕೆ ಬಿಡುಗಡೆ ಆಗಲಿದೆ ಎಂದು ರಿಯಲ್‌ಮಿ ಕಂಪೆನಿ ಲಾಂಚ್ ಡೇಟ್ ಬಹಿರಂಗಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ 'ಪ್ರೊಲೈಟ್' ಕ್ಯಾಮೆರಾವನ್ನು ಹೊಂದಿದೆ ಎಂದು ಹೇಳಲಾಗಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ನಿಗಧಿಪಡಿಸಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G96 ಪ್ರೊಸೆಸರ್ ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 33W ಚಾರ್ಜಿಂಗ್ ವೇಗವನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 399 ppi ಸಾಂದ್ರತೆಯನ್ನು ಒಳಗೊಂಡಿರಲಿದೆ. ಇದು 144Hz ರಿಫ್ರೆಶ್ ರೇಟ್ ಹೊಂದಿರಲಿದೆ ಎಂದು ವರದಿಯಾಗಿದೆ.

ಪ್ರೊಸೆಸರ್ ಹೇಗಿದೆ?
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ v12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ಮತ್ತು 8GB + 128GB ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ 'ಪ್ರೊಲೈಟ್' ಕ್ಯಾಮೆರಾ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ 33W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 9 4G ಸ್ಮಾರ್ಟ್‌ಫೋನ್ ಏಪ್ರಿಲ್ 7 ರಂದು ಮಧ್ಯಾಹ್ನ 12:30 ಕ್ಕೆ ನಡೆಯುವ ವರ್ಚುವಲ್ ಈವೆಂಟ್‌ನಲ್ಲಿ ಹ್ಯಾಂಡ್‌ಸೆಟ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ 15,000ರೂ. ಒಳಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಉಲ್ಕೆಯ ಕಪ್ಪು, ಸನ್‌ಬರ್ಸ್ಟ್ ಗೋಲ್ಡ್ ಮತ್ತು ಸ್ಟಾರ್‌ಗೇಜ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಲಾಂಚ್ ಈವೆಂಟ್ ಅನ್ನು ಕಂಪನಿಯ ಯೂಟ್ಯೂಬ್ ಮತ್ತು ಫೇಸ್‌ಬುಕ್ ಖಾತೆಗಳಲ್ಲಿ ಲೈವ್‌ಸ್ಟ್ರೀಮ್ ಮಾಡಲಾಗುತ್ತದೆ. ಇದೇ ಸಮಾರಂಭದಲ್ಲಿ ರಿಯಲ್‌ಮಿ ಭಾರತದಲ್ಲಿ ರಿಯಲ್‌ಮಿ GT 2 ಪ್ರೊ ಅನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.


Click it and Unblock the Notifications








