Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ಭಾರತಕ್ಕೆ ಲಗ್ಗೆ ಇಟ್ಟ ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌!

ಮೊಬೈಲ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿಯ ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಸ್ಥಾನ ಪಡೆದುಕೊಂಡಿದೆ. ರಿಯಲ್‌ಮಿ ಕಂಪೆನಿ ಈಗಾಗಲೇ ಮಿಡ್‌ ರೇಂಜ್‌ ಹಾಗೂ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ರಿಯಲ್‌ಮಿ 9 5G ಸರಣಿಯನ್ನು ಪರಿಚಯಿಸಿದ್ದು, ಈ ಸರಣಿಯು ರಿಯಲ್‌ಮಿ 9 5G ಮತ್ತು ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಆ ಪೈಕಿ ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಆಕರ್ಷಕ ಲುಕ್ ಎನಿಸಿದೆ.

ಸ್ಮಾರ್ಟ್‌ಫೋನ್‌

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸದಾಗಿ ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ ನಲ್ಲಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, 1,080 x 2,412 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 144Hz ರೀಫ್ರೇಶ್ ರೇಟ್‌ ಅನ್ನು ಒಳಗೊಂಡಿದ್ದು, 600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಅನ್ನು ಪಡೆದಿದೆ. ಇದರೊಂದಿಗೆ ಈ ಫೋನ್ 6GB RAM + 128 GB ಮತ್ತು 8GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ. ಈ ಫೋನ್ ವರ್ಚುವಲ್ RAM ವಿಸ್ತರಿಸುವ ಆಯ್ಕೆ ಸಹ ಪಡೆದಿದೆ. ಮೈಕ್ರೊ SD ಕಾರ್ಡ್ ಮೂಲಕ (1TB ವರೆಗೆ) ವಿಸ್ತರಿಸಬಹುದು.

ತ್ರಿವಳಿ ಕ್ಯಾಮೆರಾ ಸೆನ್ಸಾರ್

ತ್ರಿವಳಿ ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾವು ಮೊನೋಕ್ರೋಮ್‌ ಪೋರ್ಟ್ರೆಟ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾವು ಮೈಕ್ರೋ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಕ್ವಿಕ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಸೇರಿವೆ. ಹ್ಯಾಂಡ್‌ಸೆಟ್‌ನಲ್ಲಿರುವ ಸಂವೇದಕಗಳು ಸಾಮೀಪ್ಯ ಸಂವೇದಕ, ಬೆಳಕಿನ ಸಂವೇದಕ, ಗೈರೊಸ್ಕೋಪ್, ಅಕ್ಸೆಲೆರೊಮೀಟರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಒಳಗೊಂಡಿವೆ.

ಬೆಲೆ ಎಷ್ಟು?..ಸೇಲ್ ಯಾವಾಗ?

ಬೆಲೆ ಎಷ್ಟು?..ಸೇಲ್ ಯಾವಾಗ?

ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ಗಳಲ್ಲಿ ಬಿಡುಗಡೆ ಆಗಿದೆ. 6GB RAM + 128GB ಸ್ಟೋರೇಜ್‌ನ ಬೇಸ್ ವೇರಿಯಂಟ್‌ ಬೆಲೆಯು 19,999ರೂ. ಆಗಿದೆ. ಹಾಗೆಯೇ 8GB + 128GB ವೇರಿಯಂಟ್ ಬೆಲೆಯು 22,999ರೂ. ಆಗಿದೆ. ಇನ್ನು ಈ ಫೋನ್ Azure Glow ಮತ್ತು Starry Glow ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಇದೇ ಮಾರ್ಚ್ 14 ರಿಂದ ರಿಯಲ್‌ಮಿ.ಕಾಮ್ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟ ಆರಂಭಿಸಲಿದೆ.

Best Mobiles in India

English summary
Realme 9 5G SE With Triple Cameras Launched in India: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+