ಭಾರತದಲ್ಲಿ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಫೋನ್‌ಗಳಿಗೆ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇದಲ್ಲದೆ RAM ಅನ್ನು 11GB ವರೆಗೆ ವಿಸ್ತರಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಜೊತೆಗೆ ಎಐ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಲ್ಲಿ 18W ಕ್ವಿಕ್ ಚಾರ್ಜ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS ಸೇರಿವೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಲೈಟ್ ಸೆನ್ಸಾರ್, ಗೈರೊಸ್ಕೋಪ್, ಅಕ್ಸಿಲೆರೊಮೀಟರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ಮಾದರಿಗೆ 14,999ರೂ.ಬೆಲೆ ಹೊಂದಿದೆ. ಆದರೆ 6GB + 128GB ರೂಪಾಂತರದ ಬೆಲೆ 17,499ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ICICI ಬ್ಯಾಂಕ್ ಮತ್ತು SBI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ EMI ವಹಿವಾಟುಗಳಲ್ಲಿ ಖರೀದಿಸಿದರೆ 1,500ರೂ. ಕ್ಯಾಶ್‌ಬ್ಯಾಕ್ ಕೂಡ ಸಿಗಲಿದೆ. ಈ ಫೋನ್ ಮೆಟೇವ್ರ್ ಬ್ಲಾಕ್ ಮತ್ತು ಸ್ಟಾರ್ಗಜ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದು ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ.ಕಾಮ್ ಮತ್ತು ರಿಟೇಲ್ ಸ್ಟೋರ್‌ಗಳ ಮೂಲಕ ಮಾರ್ಚ್ 14 ರಿಂದ ಮಾರಾಟವಾಗಲಿದೆ.


Click it and Unblock the Notifications








