ರಿಯಲ್‌ಮಿ 9 ಪ್ರೊ+ 5G ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!..ಖರೀದಿಗೆ ಯೋಗ್ಯವೇ?

|

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಒಂದಿಲ್ಲೊಂದು ಆಫರ್‌ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್ ಆಯೋಜಿಸಿದ್ದು, ಆಯ್ದ ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್‌ಟಿವಿಗಳು ಮತ್ತು ಇತರೆ ಕೆಲವು ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ನೀಡುತ್ತಿದೆ. ಈ ವಿಶೇ‍ಷ ಮಾರಾಟವು ಇದೇ ಜೂನ್ 26 ರವರೆಗೆ ನಡೆಯಲಿದೆ. ಮುಖ್ಯವಾಗಿ ರಿಯಲ್‌ಮಿ ಸಂಸ್ಥೆಯ ಒಂದು ಫೋನ್‌ ಬೊಂಬಾಟ್‌ ಬೆಲೆಗೆ ಲಭ್ಯ ಆಗಲಿದೆ.

ಸಾವಿರದೊಳಗೆ

ಹೌದು, ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್ ಕೆಲವು ಫೋನ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಆ ಪೈಕಿ 26,999ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ 9 ಪ್ರೊ+ 5G ಫೋನ್ ಅನ್ನು ಗ್ರಾಹಕರು ಹತ್ತು ಸಾವಿರದೊಳಗೆ ಖರೀದಿಸಬಹುದು. ಇನ್ನು ರಿಯಲ್‌ಮಿ 9 ಪ್ರೊ+ 5G ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿದ್ದು, ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಬ್ಯಾಂಕ್

ರಿಯಲ್‌ಮಿ 9 ಪ್ರೊ+ 5G ಫೋನ್ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ನ ಡಿಸ್ಕೌಂಟ್‌ನಲ್ಲಿ ಪಡೆಯಬಹುದು. ಆದರೆ ಈ ಫೋನ್ ಖರೀದಿ ಮೇಲೆ ಹಲವಾರು ಬ್ಯಾಂಕ್ ಆಫರ್ ಗಳು ಮತ್ತು ಮತ್ತು ವಿನಿಮಯ ಕೊಡುಗೆಗಳು ಕೂಡಾ ಲಭ್ಯ ಆಗಲಿವೆ. ಹೀಗಾಗಿ ಈ ಫೋನ್‌ನ ಬೆಲೆ 10,000 ಗಿಂತ ಕಡಿಮೆಯಾಗುತ್ತದೆ. ರಿಯಲ್‌ಮಿ 9 ಪ್ರೊ+ 5G ಫೋನ್ ಖರೀದಿಸಲು, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ ಬಳಸಿದರೆ 6,000ರೂ, ವರೆಗೂ ರಿಯಾಯಿತಿ ಸಿಗುತ್ತದೆ. ಇದರ ಹೊರತಾಗಿ, ಎಸ್‌ಬಿಐನ ಕ್ರೆಡಿಟ್ ಕಾರ್ಡ್‌ ಮೂಲಕ ಪಾವತಿಸಿದರೆ, 1,000 ರೂ.ಗಳ ರಿಯಾಯಿತಿ ಪಡೆಯಬಹುದು. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಅನ್ನು ಎಕ್ಸ್‌ಚೇಂಜ್ ಆಫರ್ ಮೇಲೆ ಕೂಡಾ ಖರೀದಿಸಬಹುದು.

ಫೋನ್‌ನ

ರಿಯಲ್‌ಮಿ 9 ಪ್ರೊ+ 5G ನಲ್ಲಿ 12,500 ರೂ. ಗಳ ವಿನಿಮಯ ಕೊಡುಗೆ ಅಥವಾ ಎಕ್ಸ್ಚೇಂಜ್ ಆಫರ್ ಇದೆ. ಹಳೆಯ ಸ್ಮಾರ್ಟ್‌ಫೋನ್ ಅನ್ನು ವಿನಿಮಯ ಮಾಡಿಕೊಂಡರೆ, ಹೊಸ ಫೋನ್ ಖರೀದಿ ಮೇಲೆ ತುಂಬಾ ರಿಯಾಯಿತಿ ಪಡೆಯಬಹುದು. ಆದರೆ ಹಳೆಯ ಫೋನ್‌ನ ಸ್ಥಿತಿ ಉತ್ತಮವಾಗಿದ್ದರೆ ಮತ್ತು ಮಾಡೆಲ್ ಇತ್ತೀಚಿನದಾಗಿದ್ದರೆ ಮಾತ್ರ 12,500 ರೂ. ಆಫರ್ ಪಡೆಯಬಹುದು. ಇನ್ನು ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಪಿಕ್ಸೆಲ್

ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಬೆಂಬಲಿಸಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೋನಿ IMX355 ಸೆನ್ಸಾರ್‌ f/2.2 ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆಲ್ಫಿ ಕ್ಯಾಮೆರಾ ಹೊಂದಿದೆ.

ಕನೆಕ್ಟಿವಿಟಿ

ಇನ್ನು ಈ ಸ್ಮಾರ್ಟ್‌ಫೋನಿನ ಪ್ರೈಮೆರಿ ಕ್ಯಾಮೆರಾ ಪ್ರೊಲೈಟ್‌ ಇಮೇಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ. ಇದು ಉತ್ತಮ ಬೆಳಕಿನ ಸೇವನೆಯನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS, USB-Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ರಿಯಲ್‌ಮಿ 9 ಪ್ರೊ 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 ಪ್ರೊ 5G ಸ್ಮಾರ್ಟ್‌ಫೋನ್‌

ಹಾಗೆಯೇ ರಿಯಲ್‌ಮಿ 9 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. 120Hz (ಆರು-ಹಂತದ ಅಡಾಪ್ಟಿವ್) ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಸೆನ್ಸಾರ್‌

ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

Best Mobiles in India

English summary
Realme 9 Pro+ 5G Now Available At Best Discount Price: Should You Buy it.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X