Home
ಸುದ್ದಿಜಾಲ

ಇಂದು ರಿಯಲ್‌ಮಿ 9i 5G ಫಸ್ಟ್‌ ಸೇಲ್‌!..ಬಜೆಟ್‌ ಬೆಲೆಯಲ್ಲಿ ವೇಗದ 5G ಫೋನ್‌!

ರಿಯಲ್‌ಮಿ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಆಗಷ್ಟ್‌ 24) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 4GB + 64GB ಸಾಮರ್ಥ್ಯದ ಆರಂಭಿಕ ಬೆಲೆಯು 14,999 ರೂ. ಆಗಿದೆ.

ರಿಯಲ್‌ಮಿ

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ 9i 5G ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿದೆ.

ಸ್ಟೋರೇಜ್‌

ಈ ಫೋನ್ ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್‌ ಮತ್ತು 6GB RAM + 128GB ಸ್ಟೋರೇಜ್‌ ಆಗಿವೆ. ಇನ್ನು ಈ ಫೋನ್ ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್‌ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿವೆ. ಇನ್ನುಳಿದಂತೆ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 400 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 399 ಪಿಪಿಐ ಸಾಂದ್ರತೆಯನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 85.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು?

ಕ್ಯಾಮೆರಾ ಸೆನ್ಸಾರ್ ಎಷ್ಟು?

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್, ಪೋರ್ಟ್ರೇಟ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್‌ಇಡಿ ಫ್ಲ್ಯಾಶ್‌, ಹೆಚ್‌ಡಿಆರ್‌, ಪನೊರೊಮಾ ಅನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ಬ್ಯಾಕ್‌ಅಪ್‌

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/AGPS, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಇದಲ್ಲದೆ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಆಕ್ಸಿಲೆರೋಮೀಟರ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ಆವೃತ್ತಿಗೆ 13,999ರೂ. ಬೆಲೆ ಹೊಂದಿದೆ. ಇನ್ನು 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 15,999ರೂ. ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್ 24 ರಂದು (ಇಂದು) ಮಧ್ಯಾಹ್ನ 12 ಗಂಟೆಗೆ ಸೇಲ್‌ ಆಗಲಿದೆ. ಇದು ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್‌ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
Realme 9i 5G is powered by a MediaTek Dimensity processor and up to 6GB of RAM.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+