ಭಾರತದಲ್ಲಿ ರಿಯಲ್‌ಮಿಯಿಂದ ಬಜೆಟ್ ಬೆಲೆಯ 5G ಸ್ಮಾರ್ಟ್‌ಫೋನ್ ಬಿಡುಗಡೆ!
ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಇದೇ ಕಾರಣಕ್ಕೆ ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಪರಿಚಯಿಸುತ್ತಾ ಬಂದಿದೆ. ಇದೀಗ ಬಜೆಟ್ ಬೆಲೆಯಲ್ಲಿ ಹೊಸ ರಿಯಲ್‌ಮಿ 9i 5G ಫೋನ್ ಲಾಂಚ್ ಮಾಡಿದೆ. ಕೈಗೆಟಕುವ ಬೆಲೆಯಲ್ಲಿ 5G ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಡೈನಾಮಿಕ್ RAM ವಿಸ್ತರಣೆ ಟೆಕ್ನಾಲಜಿಯನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇದು ರಿಪ್ಲೆಕ್ಟಿವ್ ವಿನ್ಯಾಸದೊಂದಿಗೆ ವಿಂಟೇಜ್ ಸಿಡಿ ವಿನ್ಯಾಸವನ್ನು ಸಹ ಪಡೆಯುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?
ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 399 ಪಿಪಿಐ ಸಾಂದ್ರತೆಯನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 85.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್, ಪೋರ್ಟ್ರೇಟ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೊರೊಮಾ ಅನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟು?
ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/AGPS, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಇದಲ್ಲದೆ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಆಕ್ಸಿಲೆರೋಮೀಟರ್ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ಆವೃತ್ತಿಗೆ 13,999ರೂ. ಬೆಲೆ ಹೊಂದಿದೆ. ಇನ್ನು 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 15,999ರೂ. ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 24 ರಂದು ಮಧ್ಯಾಹ್ನ 12 ಗಂಟೆಗೆ ಸೇಲ್ ಆಗಲಿದೆ. ಇದು ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್‌ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.


Click it and Unblock the Notifications








