Just In
Don't Miss
- News
ಮೈಸೂರು, ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಇಬ್ಬರು ಸಾವು
- Automobiles
ಐಷಾರಾಮಿ ಪೋರ್ಷೆ ಎಲೆಕ್ಟ್ರಿಕ್ ಕಾರು ಟೆಸ್ಟ್ ಡ್ರೈವ್ ಮಾಡಿದ ಮೆಗಾಸ್ಟಾರ್ ಮಮ್ಮುಟ್ಟಿ
- Sports
RR vs CSK: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರು
- Lifestyle
ಸಂಖ್ಯಾಶಾಸ್ತ್ರ: ಈ ಜನ್ಮ ಸಂಖ್ಯೆ ಹೊಂದಿರುವವರ ದಾಂಪಾತ್ಯದಲ್ಲಿ ಸಮಸ್ಯೆಗಳೇ ಹೆಚ್ಚು
- Movies
ಡ್ರಾಮಾ ಜ್ಯೂನಿಯರ್ಸ್ ವೇದಿಕೆಯಲ್ಲಿ 'ಪದ್ಮಶ್ರೀ' ಜೋಗತಿ ಮಂಜಮ್ಮ, ಮಕ್ಕಳ ಅಭಿನಯಕ್ಕೆ ಫಿದಾ
- Education
IOCL Recruitment 2022 : 43 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಎಸಿ ಬಳಸಿದರೂ ವಿದ್ಯುತ್ ಬಿಲ್ ಕಡಿತ ಮಾಡುವುದು ಹೇಗೆ?
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಂದು ರಿಯಲ್ಮಿ 9i ಸ್ಮಾರ್ಟ್ಫೋನ್ ಮಾರಾಟ!..ಬೆಲೆ ಎಷ್ಟು?..ಫೀಚರ್ಸ್ ಏನು?
ರಿಯಲ್ಮಿ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ರಿಯಲ್ಮಿ 9i ಸ್ಮಾರ್ಟ್ಫೋನ್ ಆಕರ್ಷಕ ಫೀಚರ್ಸ್ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್ಫೋನ್ ಅಧಿಕೃತ ಮಾರಾಟವನ್ನು ಇದೇ ಜನವರಿ 25 ಕ್ಕೆ ನಿಗದಿಪಡಿಸಲಾಗಿದೆ. ಆದರೆ ಮೊದಲ ಮಾರಾಟಕ್ಕೆ ಮುಂಚಿತವಾಗಿ, ಕಂಪನಿಯು ಆರಂಭಿಕ ಮಾರಾಟವನ್ನು ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್ಫೋನ್ ರಿಯಲ್ಮಿ 9i ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಅನ್ನು ಹೊಂದಿದೆ.

ರಿಯಲ್ಮಿ ಕಂಪೆನಿ ನೂತನವಾಗಿ ರಿಯಲ್ಮಿ 9i ಸ್ಮಾರ್ಟ್ಫೋನ್ ಮೊದಲ ಮಾರಾಟ ಇಂದು (ಜ.22) ನಡೆಯಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 4GB RAM + 64GB ಮತ್ತು 6GB + 128GB ಆಗಿವೆ. ಹಾಗೆಯೇ ಈ ಸ್ಮಾರ್ಟ್ಫೋನ್ ಪ್ರಿಸ್ಮ್ ಬ್ಲಾಕ್ ಮತ್ತು ಪ್ರಿಸ್ಮ್ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೇ ರಿಯಲ್ಮಿ 9i ಸ್ಮಾರ್ಟ್ಫೋನಿನ ಫೀಚರ್ಸ್ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್ಮಿ 9i ಸ್ಮಾರ್ಟ್ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 20.1:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡ್ರ್ಯಾಗನ್ ಟ್ರಯಲ್ ಪ್ರೊ ಗ್ಲಾಸ್ ಪ್ರೊಟೆಕ್ಷನ್ ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ರಿಯಲ್ಮಿ 9i ಸ್ಮಾರ್ಟ್ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ರಿಯಲ್ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. 4GB RAM + 64GB ಮತ್ತು 6GB + 128GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್ಡಿ ಕಾರ್ಡ್ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ರಿಯಲ್ಮಿ 9i ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್ಮಿ 9i ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಈ ವೇಗದ ಚಾರ್ಜಿಂಗ್ ತಂತ್ರಜ್ಞಾನವು 70 ನಿಮಿಷಗಳಲ್ಲಿ ಶೂನ್ಯದಿಂದ 100 ಪ್ರತಿಶತದಷ್ಟು ಚಾರ್ಜ್ ಅನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS/ A-GPS, USB ಟೈಪ್-C, ಮತ್ತು 3.5mm ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್ಮಿ 9i ಸ್ಮಾರ್ಟ್ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರಕ್ಕಾಗಿ 13,999.ರೂ ಬೆಲೆ ಹೊಂದಿದೆ. ಇನ್ನು 6GB + 128GB ಮಾದರಿಯ ಆಯ್ಕೆಯ ಬೆಲೆ 15,999.ರೂ ಆಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999