ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ವಿಶೇಷ ಕ್ಯಾಮೆರಾ ಫೀಚರ್ಸ್, ಆಕರ್ಷಕ ಡಿಸ್‌ಪ್ಲೇ ವಿನ್ಯಾಸದಿಂದ ಜನಪ್ರಿಯತೆ ಪಡೆದಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹೌದು, ರಿಯಲ್‌ಮಿ ಕಂಪೆನಿ ವಿಯೆಟ್ನಾಂ ಮಾರುಕಟ್ಟೆಯಲ್ಲಿ ಹೊಸ ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಸದ್ಯದಲ್ಲೇ ಈ ಸ್ಮಾರ್ಟ್‌ಫೋನ್ ಭಾರತದಲ್ಲಿಯೂ ಕೂಡ ಬಿಡುಗಡೆ ಆಗಲಿದೆ ಎಂದು ರಿಯಲ್‌ಮಿ ಕಂಪೆನಿ ಹೇಳಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 9i ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪುಲ್ ಹೆಚ್‌ಡಿ + IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್, 480 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 401 PPI ನ ಪಿಕ್ಸೆಲ್ ಸಾಂದ್ರತೆ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹಾಗೂ 84.51% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಆದರೆ ಭಾರತದಲ್ಲಿ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಕ್ಯಾಮೆರಾ ಹೇಗಿದೆ?
ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಮಾತ್ರ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB-C ಪೋರ್ಟ್, ವೈಫೈ, ಬ್ಲೂಟೂತ್, GPS ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 9i ಸ್ಮಾರ್ಟ್‌ಫೋನ್ ವಿಯೆಟ್ನಾಂನಲ್ಲಿ VND 6,290,000( ಅಂದಾಜು 20,500ರೂ ) ಬೆಲೆಯನ್ನು ಹೊಂದಿದೆ. ಆದರೆ ಭಾರತದಲ್ಲಿ ಇದಕ್ಕಿಂತಲು ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸಾದ್ಯತೆ ಇದೆ. ಸದ್ಯ ಈ ಸ್ಮಾರ್ಟ್‌ಫೋನ್ ಗ್ರೀನ್ ಕ್ವಾರ್ಟ್ಜ್ ಮತ್ತು ಬ್ಲ್ಯಾಕ್ ಕ್ವಾರ್ಟ್ಜ್ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications








