Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮುಂಚೂಣಿ ಬ್ರಾಂಡ್‌ಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಅನ್ನು ಏಪ್ರಿಲ್‌ 22ಕ್ಕೆ ಫಿಕ್ಸ್‌ ಮಾಡಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಲು ವೇದಿಕೆ ಸಿದ್ಧಪಡಿಸಿಕೊಂಡಿದೆ. ಇದು 5G ಮತ್ತು ಮೀಡಿಯಾ ಟೆಕ್ ಡೈಮೆನ್ಸಿಟಿ 700 ಚಿಪ್‌ಸೆಟ್ ಹೊಂದಿರುವ ಭಾರತದ ಮೊದಲ ಫೋನ್ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಡಿಜಿಟಲ್‌ ಈವೆಂಟ್‌ ಮೂಲಕ ಲಾಂಚ್‌ ಆಗಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್-ಟು-ಬಾಡಿ 83.9% ಅನುಪಾತವನ್ನು ಪಡೆದುಕೊಂಡಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ರಿಯಲ್‌ಮಿ ಕಂಪನಿಯು ಬಹಿರಂಗಪಡಿಸಿದೆ. ಮೀಡಿಯಾ ಟೆಕ್ ಚಿಪ್‌ಸೆಟ್ ಅನ್ನು 7nm ಪ್ರಕ್ರಿಯೆಯಲ್ಲಿ ನಿರ್ಮಿಸಲಾಗಿದೆ ಮತ್ತು ಇದು 8nm ಗಿಂತ 28% ಹೆಚ್ಚಿನ ವಿದ್ಯುತ್ ದಕ್ಷತೆಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಹಾಗೆಯೇ 8GB RAM + 128GB ಮತ್ತು 8GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಕ್ಯಾಮೆರಾ

ಕ್ಯಾಮೆರಾ

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹಹ ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌-ಸಿ 2.0 ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಬ್ಲೂ ಮತ್ತು ಗ್ರೇ ಬಣ್ಣದ ಆಯ್ಕೆಯಲ್ಲಿ ಬರಲಿವೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
realme 8 5g, realme 8 5g specs, realme 8 5g features, realme 8 5g launch date in india, ರಿಯಲ್‌ಮಿ, ಸ್ಮಾರ್ಟ್‌ಫೋನ್‌,
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+