Home
ಸುದ್ದಿಜಾಲ

ನೂತನ ಮಾದರಿಯಲ್ಲಿ 'ರಿಯಲ್‌ಮಿ ಸಿ1' ಮತ್ತೆ ಬಿಡುಗಡೆ!..ಬೆಲೆ ಎಷ್ಟು?

ಭಾರತದಲ್ಲಿ ಅತಿವೇಗವಾಗಿ ಬಳೆಯುತ್ತಿರುವ ಉದಯೋನ್ಮುಖ ಮೊಬೈಲ್ ಬ್ರಾಂಡ್‌ "ರಿಯಲ್‌ಮಿ'ಯ ಬಹುಬೇಡಿಕೆಯ ಸ್ಮಾರ್ಟ್‌ಪೋನ್ ಒಂದು ಹೊಸ ಮಾದರಿಯಲ್ಲಿ ಬಿಡುಗಡೆಗೊಂಡಿದೆ. ಇತ್ತೀಚಿಗಷ್ಟೇ ಅತ್ಯಂತ ಕಡಿಮೆ ಬೆಲೆಗೆ ಬಿಡುಗಡೆಯಾಗಿದ್ದ 'ರಿಯಲ್‌ಮಿ ಸಿ1' ಸ್ಮಾರ್ಟ್‌ಪೋನ್ ಇದೀಗ 3GB ಮಾದರಿಯಲ್ಲಿ ಗ್ರಾಹಕರಿಗೆ ಲಭ್ಯವಿರುವುದಾಗಿ ಕಂಪೆನಿ ಮಾಹಿತಿ ನೀಡಿದೆ.

ಈ ಮೊದಲು 2 GB RAM ಮತ್ತು 16 GB ಇಂಟರ್ನಲ್ ಮೆಮೊರಿಯೊಂದಿಗೆ ಮಾತ್ರ ಬಿಡುಗಡೆಯಾಗಿದ್ದ 'ರಿಯಲ್‌ಮಿ ಸಿ1' ಸ್ಮಾರ್ಟ್‌ಪೋನಿನ ಮಾರಾಟ ಗಣನೀಯವಾಗಿ ಹೆಚ್ಚಿತ್ತು. ಆದರೆ, ಈ ಫೋನಿನ RAM ಮತ್ತು ಸಾಮರ್ಥ್ಯ ಸಾಕಾಗುತ್ತಿಲ್ಲ ಎಂಬ ಗ್ರಾಹಕರ ಸಮಸ್ಯೆಯನ್ನು ಅರಿತ ಕಂಪೆನಿ ಇದೀಗ 3GB RAM ಮತ್ತು 32 GB ಮೆಮೊರಿಯ ನೂತನ ಫೋನನ್ನು ಬಿಡುಗಡೆ ಮಾಡಿದೆ.

ನೂತನ ಮಾದರಿಯಲ್ಲಿ 'ರಿಯಲ್‌ಮಿ ಸಿ1' ಮತ್ತೆ ಬಿಡುಗಡೆ!..ಬೆಲೆ ಎಷ್ಟು?

ಐಫೋನ್ X ಮಾದರಿಯ ನೋಚ್ ಡಿಸ್‌ಪ್ಲೇ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ, ಆಂಡ್ರಾಯ್ಡ್ 9.0 ಪೈ ಅಪ್‌ಡೇಟ್‌ಗಳಂತಹ ಫೀಚರ್ಸ್ ಹೊಂದಿರುವ 'ರಿಯಲ್‌ಮಿ ಸಿ1' ಅತ್ಯಂತ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿದೆ. ಹಾಗಾದರೆ, 'ರಿಯಲ್‌ಮಿ ಸಿ1' ಸ್ಮಾರ್ಟ್‌ಫೋನಿನ ಫೀಚರ್ಸ್ ಯಾವುವು ಮತ್ತು ಬೆಲೆಗಳು ಎಷ್ಟು ಎಂಬುದನ್ನು ಮುಂದೆ ಓದಿ ತಿಳಿಯಿರಿ.

ವಿನ್ಯಾಸ

ವಿನ್ಯಾಸ

ರಿಯಲ್ ಮಿ C1 ಸ್ಮಾರ್ಟ್‌ಫೋನ್‌ ಓಷಿಯನ್ ಬ್ಲೂ ಮತ್ತು ಡೀಪ್ ಬ್ಲಾಕ್ ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಹೊಂದಿದ್ದು, ಮುಂಭಾಗದದಲ್ಲಿ ಐಫೋನ್ X ಮಾದರಿಯ ನೋಚ್‌ನಲ್ಲಿ ಸೆಲ್ಫಿ ಕ್ಯಾಮೆರಾ ಹೊಂದಿದ್ದು, AI ಫೇಸ್‌ ಅನ್‌ಲಾಕ್ ಫೀಚರ್‌ ಇದೆ. ಯುನಿಬಾಡಿ ಗ್ಲಾಸಿ ವಿನ್ಯಾಸ ಹೊಂದಿದ್ದು, ಬೆಜಲ್‌ ಲೆಸ್‌ ಡಿಸ್‌ಪ್ಲೇ ಹೊಂದಿದೆ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್ ಮಿ C1 ಸ್ಮಾರ್ಟ್‌ಫೋನ್‌ 6.2 ಇಂಚಿನ HD+ ಗುಣಮಟ್ಟದ 19:9 ಅನುಪಾತನದ ಡಿಸ್‌ಪ್ಲೇ ಹೊಂದಿದೆ. ಐಫೋನ್ X ಮಾದರಿಯ ನೋಚ್ ಡಿಸ್‌ಪ್ಲೇ ಹಾಗೂ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ. ಇದು ಆಂಡ್ರಾಯ್ಡ್ 8.1 ಓರಿಯೋ ಬೆಂಬಲಿತ ColorOS 5.1 ನಿಂದ ಕಾರ್ಯನಿರ್ವಹಿಸುತ್ತಿದ್ದು, ಆಂಡ್ರಾಯ್ಡ್ 9.0 ಪೈ ಅಪ್‌ಡೇಟ್ ದೊರೆಯಲಿದೆ.

ಪ್ರೊಸೆಸರ್

ಪ್ರೊಸೆಸರ್

ರಿಯಲ್ ಮಿ C1ನಲ್ಲಿ ಒಕ್ಟಾಕೋರ್‌ನ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 450 ಪ್ರೊಸೆಸರ್ ಅಳವಡಿಸಲಾಗಿದೆ. ಆಡ್ರಿನೋ 506 GPU ಕೂಡ ಕಾಣಬಹುದಾಗಿದ್ದು, ಗೇಮಿಂಗ್‌ ಮತ್ತೀತರ ಮಲ್ಟಿಮೀಡಿಯಾ ಅನುಭವಗಳನ್ನು ಉತ್ತಮಗೊಳಿಸಿತ್ತದೆ. ರಿಯಲ್‌ಮಿ C1ನ ವೇಗ 1.8GHz ಇದ್ದು, ಇಷ್ಟು ಕಡಿಮೆ ಬೆಲೆಯಲ್ಲಿ ದೊರೆಯುವ ಬೆಸ್ಟ್‌ ಸ್ಮಾರ್ಟ್‌ಫೋನ್‌ ಆಗಿದೆ.

ಮೆಮೊರಿ

ಮೆಮೊರಿ

ಈ ಮೊದಲು ರಿಯಲ್ ಮಿ C1 ಒಂದೇ ಆವೃತ್ತಿಯಲ್ಲಿ ದೊರೆಯುತ್ತುತ್ತು, 2 GB RAM ಮತ್ತು 16 GB ಇಂಟರ್ನಲ್ ಮೆಮೊರಿಯೊಂದಿಗೆ ಲಭ್ಯವಿದ್ದ ಈ ಸ್ಮಾರ್ಟ್‌ಪೋನ್ ಇದೀಗ 3GB RAM ಮತ್ತು 32 GB ಮೆಮೊರಿಯ ಮಾದರಿಯಲ್ಲಿ ಕಾಣಿಸಿಕೊಂಡಿದೆ. ಎರಡೂ ಮಾದರಿಯ ಫೋನ್‌ಗಳ ಮೆಮೊರಿಯನ್ನು ಎಸ್‌ಡಿ ಕಾರ್ಡ್‌ ಮೂಲಕ 256 GBವರೆಗೂ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ರಿಯಲ್ ಮಿ C1ನಲ್ಲಿ ಅತಿ ಕಡಿಮೆ ಬೆಲೆಗೆ ಡ್ಯುಯಲ್‌ ಕ್ಯಾಮೆರಾ ನೀಡಿದ್ದು, ಹಿಂಭಾಗದಲ್ಲಿ 13 MP+2 MP ಲೆನ್ಸ್ ಅಳವಡಿಸಲಾಗಿದೆ. ಮುಂಭಾಗದಲ್ಲಿ 5 MP ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಸೆಲ್ಫಿ ಕ್ಯಾಮೆರಾ AI ಬೆಂಬಲಿತವಾಗಿದ್ದು, ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾ ತಂತ್ರಜ್ಞಾನ ಅತ್ಯತ್ತಮವಾಗಿದೆ ಎಂದು ಹೇಳಬಹುದು.

ಬ್ಯಾಟರಿ ಮತ್ತು ಬೆಲೆ

ಬ್ಯಾಟರಿ ಮತ್ತು ಬೆಲೆ

ರಿಯಲ್ ಮಿ C1 ಸ್ಮಾರ್ಟ್‌ಫೋನ್‌ 4230mAh ಬ್ಯಾಟರಿ ಹೊಂದಿದ್ದು. ಎರಡು ದಿನಗಳ ಕಾಲ ಬ್ಯಾಟರಿ ಲೈಫ್ ನೀಡುತ್ತದೆ. ಅಲ್ಲದೇ ಪವರ್ ಸೇವಿಂಗ್ ಮೋಡ್ ಇದ್ದು, ದೀರ್ಘ ಬ್ಯಾಟರಿ ಬಾಳಿಕೆಯನ್ನು ಕಾಣಬಹುದು. ಇನ್ನು 2 GB RAM ಮಾದರಿಯ ಫೋನ್ ಬೆಲೆ 7,499 ರೂ. ಗಳಾದರೆ, 3GB RAM ಮಾದರಿಯ ಸ್ಮಾರ್ಟ್‌ಫೋನ್ ಬೆಲೆಯು ಕೇವಲ 8,499 ರೂ.ಗಳಾಗಿವೆ.

Best Mobiles in India

English summary
Realme C1 (2019) With Up to 3GB RAM, 32GB Storage Launched in India: Price, Specifications. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+