ಅಗ್ಗದ ಬೆಲೆಯ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಶಾಕ್!

|

ಮೊಬೈಲ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಅಗ್ಗದ ಬೆಲೆಯಿಂದ ಗಮನ ಸೆಳೆದಿದೆ. ಆದರೆ ಸಂಸ್ಥೆಯು ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ರೀಟೇಲ್ ಬೆಲೆಯಲ್ಲಿ ಇದೀಗ ಮತ್ತೆ ದಿಢೀರ್ ಏರಿಕೆ ಮಾಡಿದ್ದು, ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ.

ಕಂಪನಿಯು

ಹೌದು, ರಿಯಲ್‌ಮಿ ಕಂಪನಿಯು ರಿಯಲ್‌ಮಿ C ಸರಣಿಯಲ್ಲಿನ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 500ರೂ. ಏರಿಕೆ ಮಾಡಿದೆ. ಈ ಬೆಲೆ ಏರಿಕೆಯು 2GB RAM + 32GB ಮತ್ತು 4GB RAM + 64GB ಸ್ಟೋರೇಜ್ ವೇರಿಯಂಟ್ ಫೋನ್‌ಗಳಿಗೂ ಅನ್ವಯವಾಗಲಿದೆ ಎಂದು ವರದಿಯಾಗಿದೆ. ಇನ್ನು 2021ರ ಅಗಷ್ಟ ತಿಂಗಳಿನಲ್ಲಿಯೂ ರಿಯಲ್‌ಮಿ ಸಂಸ್ಥೆಯ ಕೆಲವು ಫೋನ್‌ಗಳು ಬೆಲೆ ಏರಿಕೆ ಕಂಡಿದ್ದವು, ಆ ಪೈಕಿ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಸಹ 500ರೂ. ಹೆಚ್ಚಳ ಕಂಡಿತ್ತು.

ವೇರಿಯಂಟ್

ಇದೀಗ ದರ ಹೆಚ್ಚಳದಿಂದ 2GB RAM + 32GB ಸಂಗ್ರಹದ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ವೇರಿಯಂಟ್ ಬೆಲೆಯು 7,499ರೂ. ಆಗಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ವೇರಿಯಂಟ್ ದರವು 8,999ರೂ. ಆಗಿದೆ. ಹಾಗಾದರೇ ರಿಯಲ್‌ಮಿ C11 ಸ್ಮಾರ್ಟ್‌ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌

ಡಿಸ್‌ಪ್ಲೇ ಡಿಸೈನ್‌

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು IPS LCD ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಸ್ಕ್ರೀನ್-ಟು-ಬಾಡಿ 88.7 % ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಹೊಂದಿದೆ. ಜೊತೆಗೆ 2.3GHz ಗಡಿಯಾರದ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪಿಕ್ಸೆಲ್ 4 ಸರಣಿಯಂತೆಯೇ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಶೂಟರ್ ಆಗಿದ್ದು, ಕ್ರೋಮಾ ಬೂಸ್ಟ್‌ಗೆ ಬೆಂಬಲ ನೀಡುತ್ತದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಇದು ಎಐ ಬ್ಯೂಟಿ ಮೋಡ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 40 ದಿನಗಳ ಸ್ಟ್ಯಾಂಡ್‌ ಬೈ ಟೈಂ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಬ್ಲೂಟೂತ್ 5.0, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಚ್‌ಗ್ರೀನ್‌ ಮತ್ತು ರಿಚ್‌ ಗ್ರೇ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ರಿಯಲ್‌ಮಿ ಜಿಟಿ ಮಾಸ್ಟರ್ ಎಡಿಷನ್ ಫೀಚರ್ಸ್

ರಿಯಲ್‌ಮಿ ಜಿಟಿ ಮಾಸ್ಟರ್ ಎಡಿಷನ್ ಫೀಚರ್ಸ್

ರಿಯಲ್‌ಮಿ ಜಿಟಿ ಮಾಸ್ಟರ್ ಎಡಿಷನ್‌ ಆಂಡ್ರಾಯ್ಡ್ 11 ಅನ್ನು ರಿಯಲ್‌ಮಿ ಯುಐಐ 2.0 ಚಾಲನೆ ಮಾಡುತ್ತಿದೆ. ಇದು 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. 6.43 ಇಂಚಿನ ಪೂರ್ಣ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇನ್ನೂ 8GB ವರೆಗಿನ RAM ಮತ್ತು 256 GB ವರೆಗಿನ ಸಂಗ್ರಹ ವನ್ನು ಹೊಂದಿದೆ.

Best Mobiles in India

English summary
Realme C11 2021 Price Hiked Once Again, now starts at Rs 7,499.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X