Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಕಂಪೆನಿ ಭಾರತದಲ್ಲಿ ರಿಯಲ್‌ಮಿ C11 (2021) ಅನ್ನು ಭಾರತದಲ್ಲಿ ಸೈಲೆಂಟ್‌ ಆಗಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಪ್ರಾರಂಭವಾದ ರಿಯಲ್‌ಮಿ C11 ನ ತಿರುಚಿದ ರೂಪಾಂತರವಾಗಿದೆ. ಇದು ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇನ್ನು ಈ ಫೋನ್‌ 20:9 ರಚನೆಯ ಡಿಸ್‌ಪ್ಲೇ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಸ್ಕ್ರೀನ್‌ ಟು ಬಾಡಿ 89.5% ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್ ಜೊತೆಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ. ಇದು ವೈಡ್‌ ರಿವರ್ಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಎಲ್ ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಮೈಕ್ರೋ-ಯುಎಸ್‌ಬಿ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಜೊತೆಗೆ ಇದು ಬಳಕೆದಾರರಿಗೆ OTG ಕೇಬಲ್ ಮೂಲಕ ಇತರ ಫೋನ್‌ಗಳನ್ನು ಚಾರ್ಜ್ ಮಾಡಲು ಅನುವು ಮಾಡಿಕೊಡುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಬೆಲೆ 2GB RAM + 32GB ಶೇಖರಣಾ ರೂಪಾಂತರಕ್ಕೆ 6,999 ರೂ.ಬೆಲೆ ಹೊಂದಿದೆ. ಇದು ರಿಯಲ್‌ಮೆ.ಕಾಮ್ ವೆಬ್‌ಸೈಟ್‌ನಲ್ಲಿ ಕೂಲ್ ಬ್ಲೂ ಮತ್ತು ಕೂಲ್ ಗ್ರೇ ಬಣ್ಣಗಳಲ್ಲಿ ಫೋನ್ ಖರೀದಿಸಲು ಪಟ್ಟಿ ಮಾಡಲಾಗಿದೆ.

Best Mobiles in India

English summary
Realme C11 (2021) is available for purchase in India at Rs. 6,999.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+