Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ 7,499 ರೂ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ತನ್ನ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ರಿಯಲ್‌ಮಿ ಕಂಪನಿಯ ಹೊಸ ಬಜೆಟ್ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಈಗಾಗಲೇ ರಿಯಲ್‌ಮಿ ನಾರ್ಜೊ ಸರಣಿ ಮತ್ತು ರಿಯಲ್‌ಮಿ X3 ಸರಣಿಯ ನಂತರ ಬಿಡುಗಡೆ ಆಗುತ್ತಿರುವ ಸ್ಮಾರ್ಟ್‌ಫೋನ್‌ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 7,499 ರೂ ಬೆಲೆಯನ್ನ ಹೊಂದಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ತನ್ನ c ಸರಣಿಯಲ್ಲಿ ರಿಯಲ್‌ಮಿ c11 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕೇವಲ ಒಂದು ಶೇಖರಣಾ ಆಯ್ಕೆಯನ್ನ ಹೊಂದಿದ್ದರೂ, 3-ಕಾರ್ಡ್‌ ಸ್ಲಾಟ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು IPS LCD ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯುಸ್ಕ್ರೀನ್-ಟು-ಬಾಡಿ 88.7 % ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಹೊಂದಿದೆ. ಜೊತೆಗೆ 2.3GHz ಗಡಿಯಾರದ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪಿಕ್ಸೆಲ್ 4 ಸರಣಿಯಂತೆಯೇ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಶೂಟರ್ ಆಗಿದ್ದು, ಕ್ರೋಮಾ ಬೂಸ್ಟ್‌ಗೆ ಬೆಂಬಲ ನೀಡುತ್ತದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಇದು ಎಐ ಬ್ಯೂಟಿ ಮೋಡ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 40 ದಿನಗಳ ಸ್ಟ್ಯಾಂಡ್‌ ಬೈ ಟೈಂ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಬ್ಲೂಟೂತ್ 5.0, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಬೆಲೆ 7,499 ರೂ. ಆಗಿದ್ದು, ಈ ಸ್ಮಾರ್ಟ್‌ಫೋನ್‌ ಜುಲೈ 22 ರಂದು ಫ್ಲಿಪ್ಕಾರ್ಟ್ ಮೂಲಕ ಮೊದಲ ಬಾರಿಗೆ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಚ್‌ಗ್ರೀನ್‌ ಮತ್ತು ರಿಚ್‌ ಗ್ರೇ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
With Realme C11, Realme is once again combining the best of design, performance and imaging in this price segment.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+