ರಿಯಲ್‌ಮಿ C15 ಮತ್ತು C12 ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕೆಲವೇ ವರ್ಷಗಳಲ್ಲಿ ಏರುಗತಿಯ ಬೆಳವಣಿಗೆ ಸಾಧಿಸಿರುವ ರಿಯಲ್‌ಮಿ ಟೆಕ್ ವಲಯದಲ್ಲಿ ತನ್ನ ಸ್ಥಾನವನ್ನ ಭದ್ರ ಪಡಿಸಿಕೊಂಡಿದೆ. ಸದಾ ಹೊಸತನದ ಫೀಚರ್ಸ್‌ವುಳ್ಳ ಸ್ಮಾರ್ಟ್‌ಫೋನ್ ಪರಿಚಯಿಸುವ ರಿಯಲ್‌ಮಿ ಇದೀಗ ತನ್ನ ಸಿ ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಹೌದು, ರಿಯಲ್‌ಮಿ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಸಿ ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಶೀಘ್ರವೇ ಬಿಡುಗಡೆ ಮಾಡಲಿದೆ. ಸದ್ಯ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲು ಈ ಎರಡು ಹೊಸ ಸ್ಮಾರ್ಟ್‌ಫೋನ್‌ಗಳು ಸಿದ್ದವಾಗಿವೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ರಿಯಲ್‌ಮಿ C15 ಮತ್ತು C12 ಸ್ಮಾರ್ಟ್‌ಫೋನ್ ಆಗಿದ್ದು, ಈಗಾಗಲೇ ಇಂಡೂನೆಷ್ಯಾದಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸದ್ಯ ಲಭ್ಯ ಮಾಹಿತಿಯ ಪ್ರಕಾರ ರಿಯಲ್‌ಮಿ C15 ಸ್ಮಾರ್ಟ್‌ಫೋನ್ 6.5-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.7% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಇದು 420 ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ. ಜೊತೆಗೆ ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು GE8320 GPU ನೊಂದಿಗೆ ಜೋಡಿಯಾಗಿದ. ಹಾಗೇಯೇ 4GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಇದಲ್ಲದೆ ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ f/ 2.25 ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ V5.0, 4G, GPS, 3.5 mm ಹೆಡ್‌ಸೆಟ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಸದ್ಯ ಈ ಸ್ಮಾರ್ಟ್‌ಫೋನ್ ಇಂಡೋನೇಷ್ಯಾದಲ್ಲಿ ಬಿಡುಗಡೆ ಆಗಿದ್ದು, ಅಲ್ಲಿನ ಮಾರುಕಟ್ಟೆಗಳಲ್ಲಿ ರಿಯಲ್‌ಮಿ C15 ಬೆಲೆ IDR 1,999,000 (ಸುಮಾರು 10,300 ರೂ.) ಆಗಿದೆ.


Click it and Unblock the Notifications





