Home
ಸುದ್ದಿಜಾಲ

ಭಾರತದಲ್ಲಿ ಬಜೆಟ್‌ ಬೆಲೆಯ ರಿಯಲ್‌ಮಿ C12 ಮತ್ತು C15 ಸ್ಮಾರ್ಟ್‌ಫೋನ್‌ ಲಾಂಚ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಇದೀಗ ರಿಯಲ್‌ಮಿ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ತನ್ನ ಬಜೆಟ್ C-ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಸದ್ಯ C ಸರಣಿಯಲ್ಲಿ ರಿಯಲ್‌ಮಿ C12 ಮತ್ತು ರಿಯಲ್‌ಮಿ C15 ಅನ್ನು ಬಜೆಟ್‌ ಬೆಲೆಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C12 ಮತ್ತು ರಿಯಲ್‌ಮಿ C15 ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳ ಆರಂಭಿಕ ಬೆಲೆ 8,999 ರೂ. ಆಗಿದ್ದು, ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಇನ್ನು ಎರಡೂ ಸ್ಮಾರ್ಟ್‌ಫೋನ್‌ಗಳು ಬೃಹತ್ ಗಾತ್ರದ 6,000mAh ಸಾಮರ್ಥ್ಯ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್‌ನ ಹಿಲಿಯೊ G35 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಹೊಂದಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆಯೇನು ಅನ್ನೊದನ್ನ ಇ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C12 ಡಿಸ್‌ಪ್ಲೇ

ರಿಯಲ್‌ಮಿ C12 ಡಿಸ್‌ಪ್ಲೇ

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35SOC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM + 32GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಹಂತ-ಪತ್ತೆ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಇನ್ನು ಕ್ಯಾಂಎರಾ ಫೀಚರ್ಸ್‌ಗಳಲ್ಲಿ ಎಐ ಬ್ಯೂಟಿ, ಎಚ್‌ಡಿಆರ್, ಪನೋರಮಾ, ಮತ್ತು ಟೈಮ್‌ಲ್ಯಾಪ್ಸ್ ಫೀಚರ್ಸ್‌ಗಳನ್ನು ಈ ಕ್ಯಾಮೆರಾ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಚಾರ್ಜರ್ ಅಗತ್ಯವಿಲ್ಲದೇ 2.9 ದಿನಗಳನ್ನು ಉಳಿಸಿಕೊಳ್ಳಲು ನಿಮಗೆ ಸಹಾಯ ಮಾಡುವಂತಹ ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ಗಳನ್ನು ಸಹ ನೀಡಲಾಗಿದೆ. ಜೊತೆಗೆ ಈ ಫೋನ್ ರಿಯರ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ರಿಯಲ್‌ಮಿ C15

ರಿಯಲ್‌ಮಿ C15

ಇನ್ನು ರಿಯಲ್‌ಮಿ C15 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಎಚ್‌ಡಿ + ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 88.7% ಸ್ಕ್ರೀನ್-ಟು- ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ‌ಇದು 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ f/ 2.4 "ರೆಟ್ರೊ" ಲೆನ್ಸ್ ಹೊಂದಿರುವ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ ಕೂಡ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE , ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ.ಜೊತೆಗೆ ರಿಯರ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ C12 ಸ್ಮಾರ್ಟ್‌ಫೋನ್‌ 3GB RAM + 32GB ಶೇಖರಣಾ ರೂಪಾಂತರಕ್ಕೆ ಬೆಲೆ 8,999 ರೂ.ನಿಗದಿ ಪಡಿಸಲಾಗಿದೆ. ಆದರೆ ರಿಯಲ್‌ಮಿ C15 ಬೇಸ್‌ ಮಾಡೆಲ್‌ಗೆ 9,999, ರೂ ಬೆಲೆಯನ್ನ ಹಾಗೂ 3GB RAM + 32GB, ಅದರ 4GB RAM + 64GB ಶೇಖರಣಾ ರೂಪಾಂತರಕ್ಕೆ ಕಾನ್ಫಿಗರೇಶನ್ ಬೆಲೆ ರೂ. 10,999 ರೂ.ಆಗಿದೆ. ಇನ್ನು ಈ ಎರಡೂ ಫೋನ್‌ಗಳು ಪವರ್ ಬ್ಲೂ ಮತ್ತು ಪವರ್ ಸಿಲ್ವರ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿವೆ.

Best Mobiles in India

English summary
Realme C12 price in India is set at Rs. 8,999, while Realme C15 carries a starting price tag of Rs. 9,999.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+