ಭಾರತದಲ್ಲಿ ರಿಯಲ್‌ಮಿ C12 4GB RAM ವೇರಿಯಂಟ್ ಫೋನ್ ಲಾಂಚ್!
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ಈಗಾಗಲೇ ಬಜೆಟ್ ದರದಲ್ಲಿ ಹಲವು ಸ್ಮಾರ್ಟ್‌ಫೋನ್ ಸರಣಿಗಳನ್ನು ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಆ ಪೈಕಿ ರಿಯಲ್‌ಮಿ C ಸರಣಿಯು ಒಂದಾಗಿದ್ದು, ಈ ಸರಣಿಯಲ್ಲಿ ಬಿಡುಗಡೆ ಮಾಡಿರುವ ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಗ್ರಾಹಕರ ಗಮನ ಸೆಳೆದಿತ್ತು. ಈ ನಿಟ್ಟಿನಲ್ಲಿ ಸಂಸ್ಥೆಯು ಈಗ ರಿಯಲ್‌ಮಿ C12 4GB RAM ವೇರಿಯಂಟ್ ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ.

ಹೌದು, ರಿಯಲ್‌ಮಿ ಕಂಪೆನಿ ರಿಯಲ್‌ಮಿ C12 ಫೋನಿನಲ್ಲಿ ಇದೀಗ ರಿಯಲ್‌ಮಿ C12 4GB RAM ವೇರಿಯಂಟ್ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಮೊದಲು ಸ್ಮಾರ್ಟ್‌ಫೋನ್ 3GB RAM + 32GB ವೇರಿಯಂಟ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಕನಿಷ್ಠ 4GB RAM ಇರುವ ಫೋನ್ ಹೊಂದಲು ಬಯಸುವ ಗ್ರಾಹಕರಿಗೆ ಈ ಸ್ಮಾರ್ಟ್‌ಫೋನ್ ಆಕರ್ಷಕ ಅನಿಸಲಿದೆ. ಇನ್ನು ರಿಯಲ್‌ಮಿ C12 ಫೋನಿನ ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ C12 ಡಿಸ್‌ಪ್ಲೇ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 88.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ರಿಯಲ್‌ಮಿ C12 ಪ್ರೊಸೆಸರ್
ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35SOC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM + 32GB, 4GB RAM ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ರಿಯಲ್‌ಮಿ C12 ಕ್ಯಾಮೆರಾ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು ಹಂತ-ಪತ್ತೆ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಇನ್ನು ಕ್ಯಾಂಎರಾ ಫೀಚರ್ಸ್‌ಗಳಲ್ಲಿ ಎಐ ಬ್ಯೂಟಿ, ಎಚ್‌ಡಿಆರ್, ಪನೋರಮಾ, ಮತ್ತು ಟೈಮ್‌ಲ್ಯಾಪ್ಸ್ ಫೀಚರ್ಸ್‌ಗಳನ್ನು ಈ ಕ್ಯಾಮೆರಾ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಚಾರ್ಜರ್ ಅಗತ್ಯವಿಲ್ಲದೇ 2.9 ದಿನಗಳನ್ನು ಉಳಿಸಿಕೊಳ್ಳಲು ನಿಮಗೆ ಸಹಾಯ ಮಾಡುವಂತಹ ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ಗಳನ್ನು ಸಹ ನೀಡಲಾಗಿದೆ. ಜೊತೆಗೆ ಈ ಫೋನ್ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಎಷ್ಟು?
ರಿಯಲ್‌ಮಿ C12 ಸ್ಮಾರ್ಟ್‌ಫೋನ್ 3GB RAM + 32GB ಬೇಸ್ ವೇರಿಯಂಟ್ ಬೆಲೆಯು 8,999ರೂ.ಆಗಿದೆ. ಹಾಗೆಯೇ 4GB + 64GB ಸ್ಟೋರೇಜ್ ವೇರಿಯಂಟ್ ದರವು 9,999ರೂ.ಆಗಿದೆ.


Click it and Unblock the Notifications