ಮಾರುಕಟ್ಟೆಗೆ ಎಂಟ್ರಿ ನೀಡಿದ ರಿಯಲ್‌ಮಿ C12 ಸ್ಮಾರ್ಟ್‌ಫೋನ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C12 ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಲಬ್ಯವಾಗಲಿದ್ದು, ವಾಟರ್ ಡ್ರಾಪ್‌ಶೈಲಿಯ ನಾಚ್ ಅನ್ನು ಹೊಂದಿದೆ. ಇದಲ್ಲದೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದು ಚದರ ಆಕಾರದ ಕ್ಯಾಮೆರಾ ಮಾಡ್ಯೂಲ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ದೊಡ್ಡ ಗಾತ್ರದ ಬ್ಯಾಟರಿಯನ್ನ ಹೊಂದಿದ್ದು, 6,000ಮಾಹ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ನೀಡಲಿದೆ.

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C12 ಅನ್ನು ಇದೇ ಆಗಸ್ಟ್ 18 ರಂದು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಆದರೆ ಭಾರತದ ಮಾರುಕಟ್ಟೆಗೂ ಮುನ್ನವೇ ಇದೀಗ ಇಂಡೋನೇಷ್ಯಾದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದು ಬಜೆಟ್ ಬೆಲಯಲ್ಲಿ ಲಭ್ಯವಾಗುವ ಹೊಸ ಮಾದರಿಯ ವಿನ್ಯಾಸ ಹೊಂದಿರುವ ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35SOC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 88.7% ಸ್ಕ್ರೀನ್-ಟು-ಬಾಡಿ ಅನುಪಾತ ವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ ಮೋಡ್, ಎಚ್‌ಡಿಆರ್, ಪನೋರಮಿಕ್ ವ್ಯೂ, ಪೋರ್ಟ್ರೇಟ್ ಮೋಡ್, ಟೈಮ್-ಲ್ಯಾಪ್ಸ್, ಎಚ್‌ಡಿಆರ್, ಸ್ಲೋ-ಮೋಷನ್, ನೈಟ್‌ಸ್ಕೇಪ್ ಅನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, ವೈ-ಫೈ ,ಜಿಪಿಎಸ್, ಮೈಕ್ರೋ ಯುಎಸ್‌ಬಿ ಪೋರ್ಟ್, ಮತ್ತು 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C12 ಇಂಡೋನೇಷ್ಯಾದಲ್ಲಿ ಸಿಂಗಲ್ 3GB + 32GB RAM ಶೇಖರಣಾ ಮಾದರಿಗೆ IDR 1,899,000 (ಸುಮಾರು 10,000 ರೂ.) ಬೆಲೆಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಮೆರೈನ್ ಬ್ಲೂ ಮತ್ತು ಕೋರಲ್ ರೆಡ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಲಭ್ಯ ಮಾಹಿತಿ ಪ್ರಕಾರ ಮುಂದಿನ ವಾರ ಭಾರತದಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications