ಆ.18ರಂದು ಭಾರತಕ್ಕೆ ಎಂಟ್ರಿ ಕೊಡಲಿದೆ ರಿಯಲ್‌ಮಿ C12 ಸ್ಮಾರ್ಟ್‌ಫೋನ್!
ಬಜೆಟ್ ದರದಲ್ಲಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ರಿಯಲ್‌ಮಿ ಕಂಪೆನಿಯು ಈಗ C ಸರಣಿಯಿಂದ ಮತ್ತೆ ಗ್ರಾಹಕರನ್ನು ಸೆಳೆದಿದೆ. ರಿಯಲ್‌ಮಿ ಹೊಸ ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಅನ್ನು ಅದೇ ಆಗಷ್ಟ್ 18ರಂದು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಫೋನ್ 6000mAh ಬ್ಯಾಟರಿ ಬ್ಯಾಳಿಕೆಯನ್ನು ಹೊಂದಿದ್ದು, ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ.

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ಬಜೆಟ್ ಸ್ಮಾರ್ಟ್‌ಫೋನ್ ರಿಯಲ್‌ಮಿ C12 ಅನ್ನು ಇದೇ ಆಗಸ್ಟ್ 18 ರಂದು ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SOC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ರಿಯಲ್‌ಮಿ C12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 88.7% ಸ್ಕ್ರೀನ್-ಟು-ಬಾಡಿ ಅನುಪಾತ ವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ.

ಪ್ರೊಸೆಸರ್ ಯಾವುದು
ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

ಮೂರು ಕ್ಯಾಮೆರಾ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ ಮೋಡ್, ಎಚ್‌ಡಿಆರ್, ಪನೋರಮಿಕ್ ವ್ಯೂ, ಪೋರ್ಟ್ರೇಟ್ ಮೋಡ್, ಟೈಮ್-ಲ್ಯಾಪ್ಸ್, ಎಚ್‌ಡಿಆರ್, ಸ್ಲೋ-ಮೋಷನ್, ನೈಟ್‌ಸ್ಕೇಪ್ ಅನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, ವೈ-ಫೈ ,ಜಿಪಿಎಸ್, ಮೈಕ್ರೋ ಯುಎಸ್‌ಬಿ ಪೋರ್ಟ್, ಮತ್ತು 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C12 ಸ್ಮಾರ್ಟ್‌ಫೋನ್ 3GB + 32GB RAM ಆಂತರಿಕ ಸ್ಟೋರೇಜ್ ವೇರಿಯಂಟ್ ಬೆಲೆಯು ಭಾರತದಲ್ಲಿ ಅಂದಾಜು 9,600ರೂ. ಎನ್ನಲಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೆರೈನ್ ಬ್ಲೂ ಮತ್ತು ಕೋರಲ್ ರೆಡ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications