ರಿಯಲ್‌ಮಿ C15 ಕ್ವಾಲ್ಕಾಮ್ ಆವೃತ್ತಿ ಸ್ಮಾರ್ಟ್‌ಫೋನ್ ಲಾಂಚ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ರಿಯಲ್‌ಮಿ C15 ಕ್ವಾಲ್ಕಾಮ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಪ್ರೊಸೆಸರ್ ಹೊರತುಪಡಿಸಿ ಮೀಡಿಯಾ ಟೆಕ್ ರೂಪಾಂತರದಂತೆಯೇ ಬರುತ್ತದೆ. ಆಗಸ್ಟ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾದ ರಿಯಲ್‌ಮಿ C15 ಅನ್ನು ಮೀಡಿಯಾ ಟೆಕ್ ಹಿಲಿಯೊ G35SoC ನಡೆಸುತ್ತಿದ್ದರೆ, ಈ ಹೊಸ ಕ್ವಾಲ್ಕಾಮ್ ರೂಪಾಂತರವು ಸ್ನಾಪ್‌ಡ್ರಾಗನ್ 460 SoCಯಿಂದ ಚಾಲಿತವಾಗಿದೆ.

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C15 ಕ್ವಾಲ್ಕಾಮ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ರಿಯಲ್‌ಮಿ C15 ಕ್ವಾಲ್ಕಾಮ್ ಆವೃತ್ತಿಯ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9ರಚನೆಯ ಅನುಪಾತವನ್ನು ಹೊಂದಿದ್ದು, 88.7 ಶೇಕಡಾ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 460 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UIನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 3GB RAM +32GB ಮತ್ತು 4GB RAM ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ರಿಯಲ್‌ಮಿ C15 ಕ್ವಾಲ್ಕಾಮ್ ಆವೃತ್ತಿಯು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ "ರೆಟ್ರೊ" ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ ವಿ 5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ C15 ಕ್ವಾಲ್ಕಾಮ್ ಆವೃತ್ತಿಯ ಬೆಲೆ 3GB + 32GB ರೂಪಾಂತರಕ್ಕೆ 9,999 ರೂ, ಮತ್ತು 4GB + 64GB ರೂಪಾಂತರಕ್ಕೆ 10,999 ರೂ. ಬೆಲೆಯನ್ನು ನಿಗದಿಪಡಿಸಲಾಗಿದೆ. ಇದು ಪವರ್ ಬ್ಲೂ ಮತ್ತು ಪವರ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications